ಬೇಡಿಕೆ ಈಡೇರುವತನಕ ಹೋರಾಟ

24 yelandur 01
Published on

ಯಳಂದೂರು: ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.1 ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ವೈ.ಎಂ.ಮಂಜುನಾಥ್ ತಿಳಿಸಿದರು.


ಪಟ್ಟಣದಲ್ಲಿರುವ ವಿವಿಧ ಸರ್ಕಾರಿ ಕಚೇರಿಗಳಿಗೆ ತೆರಳಿ ಸಂಘದ ಮನವಿ ಪತ್ರ ನೀಡಿ ಮಾತನಾಡಿದ ಅವರು, ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯ ಜಾರಿಗೊಳಿಸಬೇಕು. ಸರ್ಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸುವ ತನಕ ಹೋರಾಟ ನಿಲ್ಲುವುದಿಲ್ಲ ಎಂದರು. ಸಂಘದ ಪದಾಧಿಕಾರಿಗಳಾದ ಅಮ್ಮನಪುರ ಮಹೇಶ್, ನಂಜುಂಡ, ಖಜಾಂಚಿ ರಮೇಶ್, ಗೋವಿಂದ, ಸೋಮಣ್ಣ, ನಾಗರಾಜು, ನಂಜುಂಡಸ್ವಾಮಿ, ರುದ್ರಯ್ಯ, ದೇವನಾಯಕ, ನದೀಮ, ಮಾನಸಾ, ಮಾದಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net