ಚಾಲನಾ ಪರವಾನಗಿ ಪ್ರಮಾಣಪತ್ರ ವಿತರಣೆ

18raju2
Published on

ಚಾಮರಾಜನಗರ: ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ವಾಹನ ತರಬೇತಿ ಪಡೆದ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಚಾಲನಾ ಪರವಾನಗಿ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.


ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿಯ ಸಂಜೀವಿನಿ ಎನ್‌ಆರ್‌ಎಲ್‌ಎಂ ಜಿಲ್ಲಾ ಘಟಕ ಹಾಗೂ ಸ್ವಚ್ಛ ಭಾರತ್ ಮಿಷನ್ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಕಾರಿ ಎಸ್. ಪೂವಿತಾ ಪ್ರಮಾಣ ಪತ್ರ ವಿತರಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಯಲ್ಲಿನ ಘನ ತ್ಯಾಜ್ಯ ನಿರ್ವಹಣೆಯಲ್ಲಿ ಸ್ವ-ಸಹಾಯ ಸಂಘದ ಮಹಿಳೆಯರ ತಂಡ ಯಶಸ್ವಿಯಾಗಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿಸಲು ಕಾರ್ಯನಿರ್ವವಹಿಸಬೇಕು. ಇತರೆ ಸದಸ್ಯರು ವಾಹನ ತರಬೇತಿಗೆ ಬರುವಂತೆ ಹಾಗೂ ಘನ ತ್ಯಾಜ್ಯ ನಿರ್ವಹಣೆಗೆ ತೊಡಗಿಸಲು ಪ್ರೇರಣೆಯಾಗಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯಯೋಜನಾಕಾರಿ ಪ್ರಭುಸ್ವಾಮಿ ಮತ್ತು ಜಿಪಂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net