

ಚಾಮರಾಜನಗರ: ಶಿಕ್ಷಕರ ದಿನಾಚರಣೆಯನ್ನು ಡಾ.ರಾಧಕೃಷ್ಣನ್‌ರವರ ಜನ್ಮದಿನಾಚರಣೆ ಅಲ್ಲದೇ, ಶಿಕ್ಷಕರು ತಮ್ಮ ಅತ್ಯಮೂಲ್ಯವಾದ ಕರ್ತವ್ಯವನ್ನು ಸಂಭ್ರಮಿಸುವ ದಿನವಾಗಿದೆ ಎಂದು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಣ್ಣ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗ ಶಿಕ್ಷಕರ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಶಿಕ್ಷಕರು ಸಮಾಜದ ಅವಿಭಾಜ್ಯ ಅಂಗ ಅಂದರೆ ತಪ್ಪಾಗಲಾರದು. ನಮ್ಮ ದೇಶದಲ್ಲಿ ಶತಶತಮಾನಗಳಿಂದ ಬಹುಜನರಿಗೆ ಶಿಕ್ಷಣವನ್ನು ನಿರಾಕರಿಸಲಾಗಿತ್ತು. ಮಹಾರಾಷ್ಟ್ರದಲ್ಲಿ ಶಿಕ್ಷಣ ಪಡೆದ ಜ್ಯೋತಿಬಾುಲೆ ಅವರು ತಮ್ಮ ಮಡದಿಗೆ ಶಿಕ್ಷಣ ನೀಡುವ ಮೂಲಕ ದೇಶದ ಮೊಟ್ಟ ಮೊದಲ ಶಿಕ್ಷಕಿಯಾದರು. ಅವರ ತ್ಯಾಗ ಬಲಿದಾನವನ್ನು ನಾವೆಲ್ಲರೂ ಸ್ಮರಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ದೇಶದಲ್ಲಿ ಸಂವಿಧಾನ ರಚನೆ ಮಾಡುವ ಮೂಲಕ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣವನ್ನು ಸರ್ವರಿಗೂ ದೊರಕುವಂತೆ ಮಾಡಲು ಕಾರಣಕರ್ತರಾದರು. ಸಂವಿಧಾನದ ಮೂಲಕ ಪ್ರತಯೊಬ್ಬರು ಶಿಕ್ಷಣ ಪಡೆದುಕೊಳ್ಳುವ ಹಕ್ಕು ನೀಡಿದರು. ಈ ಕಾರಣಕ್ಕಾಗಿಯೇ ನಮ್ಮಂತವರು ಶಿಕ್ಷಕರಾಗಿದ್ದೇವೆ. ಶಿಕ್ಷಕರ ಜನ್ಮ ದಿನಾಚರಣೆಯ ದಿನ ನಾವೆಲ್ಲರೂ ನಮ್ಮ ಕರ್ತವ್ಯವನ್ನು ಅರಿತುಕೊಂಡು ಸಮಾಜಕ್ಕೆ ಉತ್ತಮ ವ್ಯಕ್ತಿಗಳನ್ನು ತಯಾರು ಮಾಡೋಣ ಎಂದು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ ಮಾತನಾಡಿ, ಈ ಬಾರಿ ವಿಶೇಷವಾಗಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಶಿಕ್ಷಕರ ದಿನಾಚರಣೆ ಆರಂಭಿಸಿದ್ದೇವೆ. ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲೆಯ 15 ಶಿಕ್ಷಕರು ಹಾಗೂ 43 ಜನ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿರುವುದು ವಿಶೇಷವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರೇರಾಜೇ ಅರಸ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶಂಕರ್, ಮಲ್ಲಿಕಾರ್ಜುನ್, ಮಹದೇವಸ್ವಾಮಿ, ಜೋಸ್ೆ, ಶಿವಕುಮಾರ್, ಸೈಮನ್, ನಟರಾಜು, ಎಂ.ಡಿ.ಮಹದೇವ್, ಶಿವಣ್ಣ, ಸುಬ್ರಮ್ಮಣ್ಯ ಹಾಗೂ ಇತರರು ಭಾಗವಹಿಸಿದ್ದರು.