ಚಾಮರಾಜನಗರ: ನಾಯಕ ಸಮುದಾಯದ ಬೇಡಿಕೆಗಳನ್ನು ಈಡೇರಿಸದ ಕಾರಣಕ್ಕೆ ಜಿಲ್ಲಾಡಳಿತದಿಂದ ಅ.17 ರಂದು ನಡೆಯಲಿರುವ ಶ್ರೀಮಹರ್ಷಿ ವಾಲ್ಮೀಕಿ ಜಯಂತಿಯನ್ನು ಬಹಿಷ್ಕಸುತ್ತೇವೆ ಎಂದು ಹನೂರು ತಾಲೂಕು ನಾಯಕ ಸಂಘದ ಅಧ್ಯಕ್ಷ ಪುಟ್ಟ ವೀರನಾಯಕ ಎಚ್ಚರಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲು ನಾಯಕ ಸಮುದಾಯದಿಂದ ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸಲಾಗಿದೆ. ಆದರೇ ಈವರೆಗೂ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಜಿಲ್ಲಾಡಳಿತ ಭವನದ ಮುಂಭಾಗ ವಾಲ್ಮೀಕಿ ಪುತ್ಥಳಿ ನಿರ್ಮಾಣವಾಗುವವರೆಗೆ, ಸರ್ಕಾರದ ಕಾರ್ಯಕ್ರಮಗಳಲ್ಲಿ ಸಮುದಾಯದ ಜನತೆ ಭಾಗಿಯಾಗದೇ ಬಹಿಷ್ಕಾರ ಮಾಡುತ್ತೇವೆ ಎಂದರು.ಗೋಷ್ಠಿಯಲ್ಲಿ ಹನೂರು ತಾಲೂಕು ನಾಯಕರ ಸಂಘದ ಉಪಾಧ್ಯಕ್ಷ ವೆಂಕಟಾಚಲ, ಕಾರ್ಯಾಧ್ಯಕ್ಷ ಚಿಕ್ಕ ಬಿಸಲಯ್ಯ, ಸಂಘದ ಸದಸ್ಯರಾದ ನಾಗರಾಜು, ಸಿದ್ದರಾಜು, ನಿಂಗಣ್ಣ, ಮುತ್ತಪ್ಪ ನಾಯಕ ಹಾಜರಿದ್ದರು.