ಹೆಚ್ಚಿನ ಸಂಖ್ಯೆಯಲ್ಲಿ ಆಧಾರ್ ಕೇಂದ್ರ ತೆರೆಯಿರಿ

f157f667-005a-4bfe-9a47-e0a5a926b0bd
Published on

ಚಾಮರಾಜನಗರ: ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಧಾರ್ ಕೇಂದ್ರಗಳನ್ನು ತೆರೆಯಬೇಕು ಎಂದು ಆಗ್ರಹಿಸಿ ಜನಹಿತಾಶಕ್ತಿ ಹೋರಾಟ ವೇದಿಕೆ ವತಿಯಿಂದ ಗುರುವಾರ ಪ್ರತಿಭಟನೆ ನಡೆಯಿತು.

ನಗರದ ತಾಲೂಕು ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವೇದಿಕೆ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಾರ್ಡ್ ಅಗತ್ಯ. ಹೀಗಾಗಿ ಹೊಸದಾಗಿ ಪಡೆಯಲು, ತಿದ್ದುಪಡಿ ಮಾಡಿಸಲು ಆಧಾರ್ ಕೇಂದ್ರಗಳಿಗೆ ಬರುತ್ತಾರೆ. ನಗರದಲ್ಲಿರುವ ಕೆಲವೇ ಆಧಾರ್ ಕೇಂದ್ರಗಳಲ್ಲಿ ಗ್ರಾಮಾಂತರ ಪ್ರದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಧಾರ್ ಕೇಂದ್ರಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದರು.

ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಸುವ ಸಂದರ್ಭದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಉಚಿತವಾಗಿ ದೊರೆಯುವ ಆಧಾರ್ ಕಾರ್ಡ್ ಸೌಲಭ್ಯಕ್ಕೆ ಹಣ ವಸೂಲಿ ಮಾಡುತ್ತಿದ್ದಾರೆ. ಈ ಕುರಿತು ಅಧಿಕಾರಿಗಳು ಕ್ರಮವಹಿಸಬೇಕು. ತಾಲೂಕು ಕಚೇರಿಗಳಲ್ಲಿ ಇರುವ ಆಧಾರ್ ಕೇಂದ್ರದ ಕೌಂಟರ್‌ಗಳನ್ನು 5 ರಿಂದ 10 ಕ್ಕೆ ಹೆಚ್ಚು ಮಾಡಿ, ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕೇಂದ್ರ ತೆರೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಮನವಿ ಪತ್ರವನ್ನು ತಹಸೀಲ್ದಾರ್ ಬಸವರಾಜ್ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ನಿಜಧ್ವನಿ ಗೋವಿಂದರಾಜು, ಉಮ್ಮತ್ತೂರು ಸೋಮಣ್ಣ, ಮೂಡ್ಲುಪುರ ನಾಗರಾಜು, ನಂದಕೀಶೋರ್, ಚಂದ್ರಕುಮಾರ್, ರವಿ, ಬಸವಣ್ಣ, ಕುಮಾರ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net