ಶ್ರೀ ಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ

Published on

ಚಾಮರಾಜನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 77 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ಸೋಮವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಬೆಳ್ಳೇಗೌಡ ನೇತೃತ್ವದಲ್ಲಿ ಶ್ರೀ ಚಾಮರಾಜೇಶ್ವರಸ್ವಾಮಿಗೆ ಪಂಚಾಮೃತ ಅಭಿಷೇಕ, ಎಳನೀರು ಅಭಿಷೇಕ , ಸಿದ್ದರಾಮಯ್ಯ ಹೆಸರಿನಲ್ಲಿ ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದಕ್ಕೂ ಮೊದಲು ದೀನಬಂಧು ಆಶ್ರಮದಲ್ಲಿ ಮಕ್ಕಳಿಗೆ ಉಪಾಹಾರ ವ್ಯವಸ್ಥೆ ಮಾಡಲಾಯಿತು.
ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಬೆಳ್ಳೇಗೌಡ ಮಾತನಾಡಿ, ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು ಕರುಣಿಸಲಿ, ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿ ಎಂದು ಆಶಿಸಿದರು.

ತಾಲೂಕು ಕುರುಬರ ಸಂಘದ ಅಧ್ಯಕ್ಷ ಉಮೇಶ್ ಎಸ್‌ಪಿಕೆ, ಸಿದ್ದರಾಮಯ್ಯ ಅಭಿಮಾನಿ ಬಳಗದ ಪ್ರಧಾನ ಕಾರ್ಯದರ್ಶಿ ಕುದೇರು ಲಿಂಗಣ್ಣ, ಸಂಘಟನಾ ಕಾರ್ಯದರ್ಶಿ ಕೆ.ಕೆ.ಹುಂಡಿ ನಾಗರಾಜು, ಕೆರೆಹಳ್ಳಿ ರೇವಣ್ಣ, ಉಪಾಧ್ಯಕ್ಷ ಸೊತ್ತನಹುಂಡಿ ಸೋಮಣ್ಣ, ಕಾರ್ಯದರ್ಶಿ ಮಹದೇವಸ್ವಾಮಿ, ಎಂ.ಸ್ವಾಮಿ ಕರಿನಂಜನಪುರ, ನಂದಕುಮಾರ್, ಮಹದೇವಸ್ವಾಮಿ, ಯಳಂದೂರು ಮಲ್ಲು, ತಮ್ಮಡೇಗೌಡ, ಹೆಗ್ಗಡೆಹುಂಡಿ ಸುಂದರ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net