ಹಿರಿಯ ನಾಗರಿಕರ ರಾಜ್ಯಮಟ್ಟದ ಪ್ರಶಸ್ತಿಗೆ ಆಹ್ವಾನ

prize
Published on

ಚಾಮರಾಜನಗರ: ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿ, ಸಾಧನೆ ಮಾಡಿರುವ ಹಿರಿಯ ನಾಗರಿಕರಿಗೆ ಹಾಗೂ ಸಂಸ್ಥೆಗೆ ನೀಡಲಾಗುವ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಾದ ಸಾಂಸ್ಥಿಕ, ಕಾನೂನು, ಶಿಕ್ಷಣ, ಕ್ರೀಡಾ, ಸಾಹಿತ್ಯ, ಕಲಾ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಒಂದು ಸಂಸ್ಥೆಗೆ ಪ್ರಶಸ್ತಿ ನೀಡಲಾಗುವುದು.

ಜಿಲ್ಲೆಯ ಆಸಕ್ತರು ಹಾಗೂ ಸಂಸ್ಥೆಗಳು ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಕಚೇರಿ (ಕೊಠಡಿ ಸಂಖ್ಯೆ 25)ಯಲ್ಲಿ ಪಡೆದು ಪೂರ್ಣ ವಿವರಗಳನ್ನು ಕನ್ನಡ ಭಾಷೆಯಲ್ಲಿ ಮಾತ್ರ ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಆಗಸ್ಟ್ 15 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ 08226-223688 ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net