ನಿರಂತರ 10 ಗಂಟೆ ತ್ರೀೇಸ್ ವಿದ್ಯುತ್ ಪೂರೈಕೆಗೆ ಪಟ್ಟು

13chn7
Published on

ಚಾಮರಾಜನಗರ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿತು.

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ರಾಜ್ಯ ರೈತಸಂಘ ಮತ್ತು ಹಸಿರು ಸೇನೆ, ರಾಜ್ಯ ಕಬ್ಬುಬೆಳೆಗಾರ ಸಂಘ ಹಾಗೂ ವಿದ್ಯುತ್ ಪಂಪ್‌ಸೆಟ್ ಬಳಕೆದಾರರ ಸಂಘದ ವತಿಯಿಂದ ಶುಕ್ರವಾರ ಜಮಾಯಿಸಿದ ನೂರಾರು ರೈತರು, ಅಲ್ಲಿಂದ ಮೆರವಣಿಗೆ ಹರಟು ಸುಲ್ತಾನ್‌ಷರ್ೀ ವೃತ್ತ, ದೊಡ್ಡಂಗಡಿ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಪಚ್ಚಪ್ಪ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಸಾಗಿ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಡಳಿತ ಮತ್ತು ಸೆಸ್ಕ್ ಅಧಿಕಾರಿಗಳ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವರ್ಷ ಸಾಕಷ್ಟು ಮಳೆ ಇಲ್ಲದೇ ಬರಗಾಲದ ಪರಿಸ್ಥಿತಿ ಉಂಟಾಗಿದೆ. ಜಿಲ್ಲೆಯಲ್ಲಿ ಸುಮಾರು 1 ಲಕ್ಷ ರೈತರು ಕೃಷಿ ಪಂಪ್‌ಸೆಟ್‌ಗಳನ್ನು ಅವಲಂಬಿಸಿ ಬೆಳೆ ಬೆಳೆಯುತ್ತಿದ್ದಾರೆ. ಕಳೆದ ನಾಲ್ಕೂ ತಿಂಗಳಿಂದ ಪಂಪ್‌ಸೆಟ್ ಗಳಿಗೆ ಸೆಸ್ಕ್ ಇಲಾಖೆ 1-2 ಗಂಟೆ ವಿದ್ಯುತ್ ನೀಡುತ್ತಿದ್ದು, ಸಾಕಷ್ಟು ರೈತರ ಬೆಳೆಗಳು ಒಣಗಳು ಕಾರಣರಾಗಿದ್ದಾರೆ. ಸರ್ಕಾರದ ಕನಿಷ್ಠ 7 ಗಂಟೆ ವಿದ್ಯುತ್ ನೀಡುವ ಭರವಸೆಯನ್ನು ಈಡೇರಿಸುತ್ತಿಲ್ಲ ಎಂದು ದೂರಿದರು.

ಪ್ರತಿಭಟನೆಯಲ್ಲಿ ರೈತಮುಖಂಡ ಮಹೇಶ್ ಪ್ರಭು, ರೈತ ಸಂಘದ ಜಿಲ್ಲಾಧ್ಯಕ್ಷ ಹೆಬ್ಬಸೂರು ಬಸವಣ್ಣ, ಕೊಳ್ಳೇಗಾಲ ಗೌಡ್ರು, ಹನೂರು ತಾಲೂಕು ಅಧ್ಯಕ್ಷ ಅಮ್ತಜ್ ಖಾನ್, ಮಹೇಶ್‌ಕುಮಾರ್, ಸಿದ್ದರಾಜು, ಹೊನ್ನೂರು ಬಸವಣ್ಣ, ರಮೇಶ್, ಮಹೇಶ್, ಸಿದ್ದರಾಜು, ಸಂತೋಷ್, ಶಿವಕುಮಾರ್, ರಾಜೇಶ್ ಹಾಗೂ ಇತರರು ಭಾಗವಹಿಸಿದ್ದರು.

ಶಾಸಕರಿಂದ ಮನವೊಲಿಕೆಗೆ ಪ್ರಯತ್ನ:
ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನಾ ಧರಣಿ ನಿರತ ರೈತರನ್ನು ಮನವೊಲಿಕೆ ಮಾಡಲು ಪ್ರಯತ್ನಿಸಿದರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಈ ವರ್ಷ ಸೂಕ್ತರೀತಿಯಲ್ಲಿ ಮಳೆ ಆಗಿಲ್ಲ. ಜಲಾಶಗಳು ಭರ್ತಿಯಾಗಿಲ್ಲ. ವಿದ್ಯುತ್ ಉತ್ಪಾದನೆಗೆ ಸಾಕಷ್ಟು ತೊಂದರೆ ಉಂಟಾಗಿದೆ. ಆದರೆ ಸರ್ಕಾರ ಸುಮ್ಮನೇ ಕೂತಿಲ್ಲ. ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಸುವ ಪ್ರಯತ್ನ ಮಾಡುತ್ತಿದೆ. ಸ್ವತಃ ಮುಖ್ಯಮಂತ್ರಿ, ಸಚಿವರು ವಿದ್ಯುತ್ ಖರೀದಿಗೆ ಶ್ರಮವಹಿಸುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಕಲ್ಲಿದ್ದಲು ಖರೀದಿಸುವ ಪ್ರಯತ್ನ ಮಾಡಲಾಗುತ್ತಿದೆ. ಆದಷ್ಟು ಬೇಗ ರೈತರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು. ಯಾವುದೇ ಮಾತುಗಳಿಗೂ ಮಣೆ ಹಾಕದ ರೈತ ಮುಖಂಡರು ರಾಜ್ಯ ಸರ್ಕಾರ ನಿರಂತರ 10 ಗಂಟೆ ತ್ರೀೇಸ್ ವಿದ್ಯುತ್ ಪೂರೈಕೆ ಮಾಡಲೇ ಬೇಕು ಎಂದು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್‌ಪ್ರಸಾದ್ ಹಾಗೂ ಎಂ.ಆರ್.ಮಂಜುನಾಥ್, ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾಹುಡೇದಾ ಹಾಗೂ ರೈತ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net