ಛೇಂಬರ್ ಆಫ್ ಕಾಮರ್ಸ್ ಮಹಾಸಭೆ : ಆಡಳಿತ ಮಂಡಳಿಯ ಸದಸ್ಯ ಜಯಾನಂದ ಗೌಡಗೆ ಅಭಿನಂದನೆ

sabhe
Published on

ಬೆಳ್ತಂಗಡಿ: ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್‌ನ ವಾರ್ಷಿಕ ಮಹಾಸಭೆ ಬೆಳ್ತಂಗಡಿಯಲ್ಲಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ನಗರ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಸಂಘದ ಆಡಳಿತ ಮಂಡಳಿಯ ಸದಸ್ಯ ಜಯಾನಂದ ಗೌಡ ಅವರನ್ನು ಗೌರವಿಸಲಾಯಿತು.

ಸಂಘಟನೆಯ ಚಟುವಟಿಕೆಗಳ ಬಗ್ಗೆ ಹಾಗೂ ಹೆದ್ದಾರಿಯ ರಸ್ತೆ ಅಗಲೀಕರಣದ ಸಂದರ್ಭ ವರ್ತಕರಿಗೆ ಆಗುವ ತೊಂದರೆಗಳನ್ನು ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದು ಸರಿಪಡಿಸುವ ಬಗ್ಗೆ ಚರ್ಚಿಸಲಾಯಿತು. ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ರೋನಾಲ್ಡ್ ಲೋಬೊ, ಪ್ರಧಾನ ಕಾರ್ಯದರ್ಶಿಯಾಗಿ ಲ್ಯಾನ್ಸಿ ಎ.ಪಿರೇರಾ, ಕೋಶಾಧಿಕಾರಿಯಾಗಿ ಸುನೀಲ್ ಶೆಣೈ, ಉಪಾಧ್ಯಕ್ಷರಾಗಿ ಶಶಿಧರ ಪೈ ಆಯ್ಕೆಯಾದರು. 30 ಮಂದಿ ಸದಸ್ಯರನ್ನು ಆಡಳಿತ ಮಂಡಳಿಗೆ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

ಪ್ರಧಾನ ಕಾರ್ಯದರ್ಶಿ ರೋನಾಲ್ಡ್ ಲೋಬೊ ವರದಿ ಮಂಡಿಸಿದರು. ಕೋಶಾಧಿಕಾರಿ ಸುನೀಲ್ ಶೆಣೈ ಲೆಕ್ಕಪತ್ರ ಮಂಡಿಸಿದರು. ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಯಶವಂತ ಪಟವರ್ಧನ್ ಮಹಾಸಭೆಯ ನೋಟಿಸ್ ದಾಖಲಿಸಿದರು. ಲ್ಯಾನ್ಸಿ ಎ.ಪಿರೇರಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net