ಸಾಹಿತ್ಯ ಸಮ್ಮೇಳನದಲ್ಲಿ ಕವನ ವಾಚಿಸಿದ ಚಾಮೆರ ನಕ್ಷದೇಚಮ್ಮ

17.npk-1
ಚಾಮೆರ ನಕ್ಷದೇಚಮ್ಮ
Published on

ನಾಪೋಕ್ಲು: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಸಹ ಯೋಗದೊಂದಿಗೆ ನಡೆದ 20ನೇ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯ ಪರ ಚಾಮೆರ ನಕ್ಷದೇಚಮ್ಮ ಭಾಗವಹಿಸಿ ಕವನ ವಾಚಿಸಿದಳು.

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ 80ನೇ ಜನ್ಮೋತ್ಸವ ಪ್ರಯುಕ್ತ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಮಕ್ಕಳ ಸಮ್ಮೇಳನದಲ್ಲಿ ಚಾಮೆರ ನಕ್ಷದೇಚಮ್ಮ ಕೊಡಗು ಜಿಲ್ಲೆಯ ಏಕೈಕ ಪ್ರತಿನಿಧಿಯಾಗಿ ಭಾಗವಹಿಸಿ ಕವನ ವಾಚಿಸಿದಳು.

ಚಾಮೆರ ದಿನೇಶ್ ಬೆಳ್ಯಪ್ಪ, ಪ್ರಿಯಾ ದಿನೇಶ್ ದಂಪತಿ ಮಗಳಾದ ಚಾಮೆರ ನಕ್ಷದೇಚಮ್ಮ ಎಸ್.ಎಂ.ಎಸ್. ವಿದ್ಯಾಪೀಠದ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

ಚಾಮೆರ ನಕ್ಷದೇಚಮ್ಮ ಕವನ ವಾಚನ ವೇಳೆ ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಗೋ.ರ.ಚನ್ನಬಸಪ್ಪ, ನಟ ‘ಮುಖ್ಯಮಂತ್ರಿ’ ಚಂದ್ರು, ಮಕ್ಕಳ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಅಶೋಕ್, ಕನ್ನಡ ಸಾಹಿತ್ಯ ಪರಿಷತ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಮಂಜುನಾಥ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net