ಮಂಡ್ಯ ನಗರದಲ್ಲಿ ಜಿಲ್ಲಾಮಟ್ಟದ ಚೆಸ್ ಟೂರ್ನಿ: ರಾಯಲ್ ಅಕಾಡೆಮಿಯ ಆರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Champion in chess tournament mandya
oppo_0
Published on

ಮಂಡ್ಯ: ನಗರದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ನಮ್ಮ ರಾಯಲ್ ಚೆಸ್ ಅಕಾಡೆಮಿಯ ಆರು ವಿದ್ಯಾರ್ಥಿಗಳು ಗೆದ್ದು ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದು ಅಕಾಡೆಮಿ ತರಬೇತುದಾರ ಎಂ.ಎಸ್.ಚೇತನ್ ತಿಳಿಸಿದರು.

ನಗರದ ಗಾಂಧಿಭವನದಲ್ಲಿ ನಡೆದ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಹಲವು ವಿಭಾಗಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿ ಈ ಆರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಉಳಿದವರು ಕೂಡ ಬಹುಮಾನ ಗಳಿಸಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

19 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಆಶಿತ್ ರಂಜನ್‌ಗೌಡ, 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಎಸ್.ಸುಮುಕ್, 13 ವರ್ಷದೊಳಗಿನ ವಿಭಾಗದಲ್ಲಿ ಎಂ.ಎಚ್.ಯದ್ವಿತಿ, 11 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಸಿ.ಚಿರಾಗ್, 9 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ನಿಹಾರಿಕ, 7ನೇ ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಹೇಮಂತ್ ಆಯ್ಕೆಯಾಗಿದ್ದಾರೆ. ಇತರ ವಿದ್ಯಾರ್ಥಿಗಳು ಸಹ ಬಹುಮಾನಗಳನ್ನು ಗಳಿಸಿದ್ದು, ವಿಜೇತ ಅಭ್ಯರ್ಥಿಗಳಿಗೆ ಸಂಸ್ಥೆ ವತಿಯಿಂದ ಅಭಿನಂದನೆಗಳನ್ನು ತಿಳಿಸಿದರು.

ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net