

ಚಾಮರಾಜನಗರ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಡೆಯುತ್ತಿರುವ ಪ್ರತಿಭಟನಾ ಧರಣಿ ಎರಡನೇ ದಿನವೂ ಮುಂದುವರಿಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಧರಣಿ ಕುಳಿತ ಪ್ರತಿಭಟನಾಕಾರರು, ರಾಜ್ಯ ಸರ್ಕಾರ, ಜಿಲ್ಲಾಡಳಿತ ಮತ್ತು ಸೆಸ್ಕಾಂ ಅಧಿಕಾರಿಗಳ ವಿರುದ್ಧ ೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಈ ಸಂದರ್ಭದಲ್ಲಿ ರೈತ ಮುಖಂಡ ಮಹೇಶ್ ಪ್ರಭು ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆಯಾಗಿಲ್ಲ. ಸಂಪೂರ್ಣ ಬರದ ಛಾಯೇ ಆವರಿಸಿದ್ದು, ರೈತರು ಬೆಳೆದ ಬೆಳೆಗಳಿಗೆ ನೀರಿಲ್ಲದೇ ಒಣಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವೇ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸೂಕ್ತರೀತಿಯಲ್ಲಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆದೇಶ ನೀಡಿದ್ದರೂ, ಸೆಸ್ಕಾಂ ಅಧಿಕಾರಿಗಳು ಇದನ್ನು ನಿರ್ಲಕ್ಷ್ಯಿಸಿ ಕೇವಲ 1-2 ಗಂಟೆ ವಿದ್ಯುತ್ ಪೂರೈಕೆ ಮಾಡುತ್ತಿದ್ದಾರೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ಸೆಸ್ಕಾಂ ಅಧಿಕಾರಿಗಳಿಗೆ ಇಲ್ಲಿನ ರೈತರ ಸ್ಥಿತಿಗತಿ ಅರ್ಥಮಾಡಿಕೊಳ್ಳಲು ಆಗುತ್ತಿಲ್ಲ. ಜಿಲ್ಲಾಡಳಿತವೂ ರೈತರಿಗೆ ಸೂಕ್ತರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಕೂಡಲೇ ರಾಜ್ಯ ಸರ್ಕಾರ ಮಧ್ಯೆ ಪ್ರವೇಶಮಾಡಿ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರವಾಗಿ 10 ಗಂಟೆಗಳ ಕಾಲ ತ್ರಿೇಸ್ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಕಬ್ಬುಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಜಿಲ್ಲೆಯಲ್ಲಿರುವ 75 ಸಾವಿರ ಕೃಷಿ ಪಂಪ್‌ಸೆಟ್‌ಗಳ ವ್ಯಾಪ್ತಿಯಲ್ಲಿ ನೂರಾರು ಕೋಟಿ ಆದಾಯ ಬರುವ ಬೆಳೆಯನ್ನು ರೈತರು ಬಿತ್ತನೆ ಮಾಡಿದ್ದು, ಮಳೆ ಇಲ್ಲದೇ, ಪಂಪ್‌ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಇಲ್ಲದೇ ಒಣಗುತ್ತಿದೆ. ಸರ್ಕಾರ ರೈತರಿಗೆ ವಿದ್ಯುತ್ ನೀಡುವಂತೆ ಆದೇಶ ನೀಡಿದ್ದರೂ, ಜಿಲ್ಲಾಡಳಿತ ಮತ್ತು ಸೆಸ್ಕಾಂ ಅಧಿಕಾರಿಗಳು ವಿದ್ಯುತ್ ಪೂರೈಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಮೂಲಕ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಎಷ್ಟರ ಮಟ್ಟಿಗೆ ರೈತರ ಪರ ಎಂಬುದನ್ನು ಸಾಬೀತು ಮಾಡುತ್ತಿದೆ. ಇದು ಈಗೆಯೇ ಮುಂದುವರಿದರೇ ನಮ್ಮ ಜನಪ್ರತಿನಿಧಿಗಳನ್ನು ಓಡಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡ ಮಹೇಶ್‌ಕುಮಾರ್, ಕಾಳನಹುಂಡಿ ಗುರುಸ್ವಾಮಿ, ಮಲೆಯೂರು ಹರ್ಷ, ಮಂಜುನಾಥ್, ಬಸವರಾಜಪ್ಪ, ಮಹೇಂದ್ರ, ಸತೀಶ್, ಕಾಳಪ್ಪ, ಮಹೇಶ್, ಕೃಷ್ಣ, ಗುರುಮಲ್ಲಪ್ಪ, ಗುರುಸಿದ್ದಪ್ಪ, ಮಹದೇವಸ್ವಾಮಿ, ಸಿದ್ದಲಿಂಗಪ್ಪ, ಮಾದೇಶ್, ಸಿದ್ದೇಶ್, ನಿರಂಜನ್, ರಾಜಣ್ಣ, ಸುರೇಶ್, ಗುರುಸಿದ್ದಪ್ಪ, ಸಿದ್ದಲಿಂಗಪ್ಪ, ಮಂಜು ಹಾಗೂ ಇತರರು ಭಾಗವಹಿಸಿದ್ದರು.
‘ಅ.19 ರಂದು ಸೆಸ್ಕಾಂ ಕಚೇರಿ ಮುತ್ತಿಗೆ’
ರೈತರ ವಿದ್ಯುತ್ ಸಂಬಂಧಿಸಿದ ಬೇಡಿಕೆಗಳನ್ನು ಈಡೇರಿಸದೇ ಇದ್ದಲ್ಲಿ ಅ.19 ರಂದು ಮೈಸೂರಿನಲ್ಲಿರುವ ಸೆಸ್ಕಾಂ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ರೈತಮುಖಂಡ ಮಹೇಶ್‌ಪ್ರಭು ತಿಳಿಸಿದರು. ಈಗಾಗಲೇ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈರೊಂದೊಗೆ ಮಾತುಕಥೆ ನಡೆಸಲಾಗಿದ್ದು, ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಒತ್ತಾಯಿಸಿ ಸೆಸ್ಕಾಂ ಕಚೇರಿ ಮುತ್ತಿಗೆ ಹಾಕುತ್ತೇವೆ. ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದಲ್ಲಿ ಹೋರಾಟ ರೂಪಿಸಲಾಗುವುದು ಎಂದರು.