ಚಾಮುಂಡೇಶ್ವರಿ ದೇವಿ ಉತ್ಸವ

24ark3
ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿ ಉತ್ಸವ ಸಂಭ್ರಮದಿಂದ ಜರುಗಿತು.
Published on

ಅರಕಲಗೂಡು: ತಾಲೂಕಿನ ರಾಮನಾಥಪುರದಲ್ಲಿ ಬುಧವಾರ ಶ್ರೀ ಚಾಮುಂಡೇಶ್ವರಿ ದೇವಿ ಉತ್ಸವ ವಿಜೃಂಭಣೆಯಿಂದ ಜರುಗಿತು.

ಶ್ರೀ ರಾಮೇಶ್ವರ ದೇವಾಲಯ ರಸ್ತೆಯಲ್ಲಿ ಗೋಂದಳಿ ಸಮಾಜದ ವತಿಯಿಂದ ಪ್ರತಿಷ್ಠಾಪಿಸಿದ್ದ ಅಲಂಕೃತ ಶ್ರೀ ಚಾಮುಂಡೇಶ್ವರಿ ದೇವಿಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಬಳಿಕ ಬೆಳ್ಳಿ ರಥದ ಮೇಲೆ ದೇವಿ ಮೂರ್ತಿ ಕೂರಿಸಿ ಪ್ರಮುಖ ಬೀದಿಗಳಲ್ಲಿ ವೈಭವದ ಮೆರವಣಿಗೆ ಮಾಡಲಾಯಿತು. ಉತ್ಸವದ ವೇಳೆ ಯುವಕರು, ಯುವತಿಯರು ಹಾಗೂ ಸಮಾಜದ ಮುಖಂಡರು ಕುಣಿದು ಸಂಭ್ರಮಿಸಿದರು.

ಮೆರವಣಿಗೆ ನಂತರ ಶ್ರೀ ವಹ್ನಿ ಪುಷ್ಕರಣಿ ತಟದ ಕಾವೇರಿ ನದಿಯಲ್ಲಿ ಭಕ್ತರ ಜಯಘೋಷಗಳ ನಡುವೆ ವಿಸರ್ಜಿಸಲಾಯಿತು. ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net