ಜುಲೈ 10ಕ್ಕೆ ಚಾಮುಂಡೇಶ್ವರಿ ವರ್ಧಂತ್ಯುತ್ಸವ

mysore chamundi rathotsava
Published on

ಈ ಬಾರಿ ನಾಲ್ಕು ಆಷಾಢ ಶುಕ್ರವಾರಗಳು ಬಂದಿವೆ. ಜೂ.23ಕ್ಕೆ ಮೊದಲ ಆಷಾಢ ಶುಕ್ರವಾರವಾಗಿದ್ದು, ಜುಲೈ 10 ರಂದು ಚಾಮುಂಡೇಶ್ವರಿ ದೇವಿಯ ವಧರ್ಂತಿ ಮಹೋತ್ಸವ ನಡೆಯಲಿದೆ ಎಂದು ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ಆಷಾಢ ಶುಕ್ರವಾರ ಹಾಗೂ ವಧರ್ಂತಿಯ ದಿನಗಳಂದು ದೇವಿಗೆ ವಿಶೇಷ ಪೂಜೆಗಳು ನೆರವೇರಲಿವೆ. ಜತೆಗೆ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಅಲಂಕಾರ ಮಾಡಲಾಗುತ್ತದೆ ಎಂದರು.

ಆಷಾಢ ಎಂಬುದು ವಿಶೇಷವಾದ ಮಾಸವಾಗಿದ್ದು, ಈ ಮಾಸದಲ್ಲಿ ಯಾವುದೇ ಶುಭ ಸಮಾರಂಭಗಳು ಇಲ್ಲದಿರುವುದರಿಂದ ಎಲ್ಲರೂ ದೇವಸ್ಥಾನಗಳಿಗೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಾರೆ. ಆಷಾಢ ಮಾಸದಲ್ಲಿ ಶಕ್ತಿ ದೇವತೆಯ ದರ್ಶನ ಪಡೆದರೆ ಇಷ್ಟಾರ್ಥ ಸಿದ್ಧಿ ಆಗುತ್ತದೆ ಎಂಬ ನಂಬಿಕೆ ಇದೆ. ಚಾಮುಂಡಿ ಬೆಟ್ಟದಲ್ಲಿ ರಾಜ- ಮಹಾರಾಜರ ಕಾಲದಿಂದಲೂ ಆಷಾಢ ಮಾಸದಲ್ಲಿ ಚಾಮುಂಡಿ ತಾಯಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸುತ್ತಾ ಬರಲಾಗುತ್ತಿದೆ ಎಂದರು.

ಪ್ರತಿವರ್ಷದಂತೆ ಈ ವರ್ಷವೂ ಶ್ರದ್ಧಾಭಕ್ತಿಯಿಂದ ಆಷಾಢ ಶುಕ್ರವಾರವನ್ನು ಆಚರಿಸಲಾಗುವುದು. ನಾಲ್ಕು ಆಷಾಢ ಹಾಗೂ ವರ್ಧಂತಿಗೆ ವಿಶೇಷ ಪೂಜೆ ನಡೆಯಲಿದೆ. ಭಕ್ತರಿಗೆ ದೇವರ ದರ್ಶನಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ. ದರ್ಶನಕ್ಕೆ ಯಾವುದೇ ಪಾಸ್ ಇರುವುದಿಲ್ಲ. ವಿಐಪಿಗಳಿಗೆ ಪ್ರತ್ಯೇಕ ದರ್ಶನ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net