ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇನ್ನೆರಡು ದಿನಗಳ ಕಾಲ ಹೆಚ್ಚುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಮುಂದಿನ 2 ದಿನ ಆರೆಂಜ್ ಅಲರ್ಟ್, ಹಾಗೂ ನಂತರ ಕೆಲವು ದಿನ ಎಲ್ಲೋ ಅಟರ್ಲ್ ಗೋಷಿದೆ.
ಗುರುವಾರ ಬೆಳಗ್ಗೆಯಿಂದಲ್ಲೇ ತುಂತುರು ಮಳೆಯ ಜತೆಗೆ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಈ ಬಳಿಕ ಸಾಧಾರಣ ಮಳೆ ಸಾಗಿದೆ. ಮಂಗಳೂರು ನಗರ ಭಾಗದಲ್ಲಿ ಸಂಜೆಯಾಗುತ್ತಿದ್ದಂತೆ ಉತ್ತಮ ಮಳೆ ಕಾಣಿಸಿಕೊಂಡಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮಧ್ಯಾಹ್ನ ಬಳಿಕ ಮಳೆ ಸುರಿದಿದ್ದುಘಿ, ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಸೇರಿದಂತೆ ಮೂಡುಬಿದಿರೆ, ಸುರತ್ಕಲ್ ಭಾಗದಲ್ಲಿ ಮಳೆಯಿಂದ ವಿದ್ಯುತ್ ವ್ಯತ್ಯಯ ಸೇರಿದಂತೆ ಸಣ್ಣ ಪುಟ್ಟ ಹಾನಿಗಳು ಸಂಭವಿಸಿದೆ.
*ವಾಯುಭಾರ ಕುಸಿತ
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಮಳೆ ಹೆಚ್ಚಿರುವ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಾಧ್ಯತೆಯೂ ಇದೆ. ಬಂಗಾಳಕೊಲ್ಲಿಯ ಗಾಳಿ ಹಾಗೂ ಮೋಡದ ತಿರುಗುವಿಕೆಯು ಅ.24ರಂದು ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿರುವುದರಿಂದ ರಾಜ್ಯದಲ್ಲಿ ಅ.28ರ ತನಕವೂ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
*ಮೀನುಗಾರರಿಗೆ ಎಚ್ಚರಿಕೆ
ದ.ಕ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗಿನ ಮಾಹಿತಿಯಂತೆ ಕಳೆದ 24 ಗಂಟೆಗಳಲ್ಲಿ 16.7 ಮಿಮಿ ಮಳೆ ದಾಖಲಾಗಿತು. ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಕಡಲು ಬಹಳಷ್ಟು ಪ್ರಕ್ಷುಬ್ದದಿಂದ ಕೂಡಿದ್ದು ಜಿಲ್ಲೆಯ ಎ್ಲ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆವಹಿಸುವಂತೆ ಇಲಾಖೆ ಮಾಹಿತಿ ನೀಡಿದೆ.