ಬ್ಯಾಂಕಿಂಗ್ ಪರೀಕ್ಷೆಯ ಯಶಸ್ಸಿನ ಸೂತ್ರ ತಿಳಿಸಿದ ಮುಕ್ತ ವಿವಿ ಕುಲಪತಿ

November KSOU
Published on

ಮೈಸೂರು: ಸ್ಪಷ್ಟವಾದ ಗುರಿ ಹಾಗೂ ಶ್ರದ್ಧೆಯಿಂದ ಓದಿದರೆ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಯಶಸ್ಸು ಕಾಣಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಭಾರ ಕುಲಪತಿ ಡಾ. ಎ. ಖಾದರ್ ಪಾಷ ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಮಂಗಳವಾರ ಆಯೋಜಿಸಿದ್ದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮತನಾಡಿ, ಈಗ ಎಲ್ಲ ಹುದ್ದೆಗಳ ಆಯ್ಕೆಗೆ ಪರೀಕ್ಷೆ ಇರುವುದರಿಂದ ನಿರಂತರವಾಗಿ ಅಧ್ಯಯನ ಮಾಡುತ್ತಲೇ ಇರಬೇಕು. ಹೆಚ್ಚೆಚ್ಚು ಪರೀಕ್ಷೆಗಳನ್ನು ಎದುರಿಸುವುದರಿಂದ ಹೆಚ್ಚೆಚ್ಚು ಅನುಭವ ಸಿಗಲಿದೆ ಎಂದರು.

ಒಂದಲ್ಲ ಒಂದು ಕಡೆ ಉದ್ಯೋಗ ಸಿಕ್ಕೇ ಸಿಗುತ್ತದೆ. ಮುಖ್ಯವಾಗಿ ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಅಧ್ಯಯನ ಹಾಗೂ ಪ್ರಯತ್ನ ಮಾಡಬೇಕಷ್ಟೆ. ಜತೆಗೆ ಐಎಎಸ್, ಐಪಿಎಸ್, ಐಎಫ್‌ಎಸ್, ಕೆಎಎಸ್ ಮುಂತಾದ ಪರೀಕ್ಷೆಗಳನ್ನು ಎದುರಿಸಲು ಬ್ಯಾಂಕಿಂಗ್ ಹುದ್ದೆಗಳ ಪರೀಕ್ಷಾ ಅಧ್ಯಯನ ಸಂದರ್ಭದಲ್ಲಿಯೇ ಸಿದ್ದತೆ ಮಾಡಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.

ಮುಕ್ತ ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net