ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನೆರವೇರಿಸಿದ ಗೋವಾ ಸಿಎಂ

kollur Goa cm web
Published on

ಬೈಂದೂರು: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕುಟುಂಬಿಕರೊಂದಿಗೆ ಮಂಗಳವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಚಂಡಿಕಾ ಹೋಮ ಸೇವೆ ನಡೆಸಿ, ವಿಶೇಷ ಪೂಜೆ ಸಲ್ಲಿಸಿದರು.

ಸೋಮವಾರ ಕ್ಷೇತ್ರಕ್ಕೆ ಆಗಮಿಸಿದ್ದ ಅವರು ರಾತ್ರಿ ರಂಗಪೂಜೆ ನೆರವೇರಿಸಿದ್ದು, ಮಂಗಳವಾರ ಬೆಳಗ್ಗೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯೆ ರತ್ನಾ ರಮೇಶ ಕುಂದರ್ ಹಾಗೂ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಗೋವಿಂದ ನಾಯ್ಕ ಮುಖ್ಯಮಂತ್ರಿಗಳನ್ನು ದೇವಳದ ವತಿಯಿಂದ ಗೌರವಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net