ಚಂದಗಾಲು ಡೇರಿಗೆ ಅಧ್ಯಕ್ಷರಾಗಿ ದೊಡ್ಡಜೋಗಿಗೌಡ ಮತ್ತು ಉಪಾಧ್ಯಕ್ಷರಾಗಿ ಕುಮಾರ ಅವಿರೋಧ ಆಯ್ಕೆ

Chandagalu Dairy Elecation
Published on

ಮಂಡ್ಯ: ತಾಲೂಕಿನ ದುದ್ದ ಹೋಬಳಿ ಚಂದಗಾಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ದೊಡ್ಡಜೋಗಿಗೌಡ ಮತ್ತು ಉಪಾಧ್ಯಕ್ಷರಾಗಿ ಕುಮಾರ ಅವಿರೋಧವಾಗಿ ಆಯ್ಕೆಯಾದರು.

ಡೇರಿಗೆ 11 ನಿರ್ದೇಶಕರನ್ನು ಹೊಂದಿದೆ. ಬುಧವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ದೊಡ್ಡಜೋಗಿಗೌಡ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕುಮಾರ ಮಾತ್ರ ನಾಮಪತ್ರ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಅವಿರೋಧದ ಆಯ್ಕೆ ಘೋಷಣೆ ಮಾಡಲಾಯಿತು. ನೂತನ ವರಿಷ್ಠರು ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಮತ್ತು ಉಪಾಧ್ಯಕ್ಷ ಎಂ.ಎಸ್.ರಘುನಂದನ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.

ಬಿ.ಆರ್.ರಾಮಚಂದ್ರು ಮಾತನಾಡಿ, ಡೇರಿಯನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ದಿಯತ್ತ ಕೊಂಡೊಯ್ಯಬೇಕು. ಹಾಲು ಉತ್ಪಾದಕರನ್ನು ಉತ್ತೇಜಿಸುವ ರೀತಿ ಕೆಲಸ ಮಾಡಿ ಪ್ರೋತ್ಸಾಹಿಸಬೇಕು. ಸರ್ಕಾರ ಹಾಗೂ ಮನ್‌ಮುಲ್‌ನಿಂದ ಸಿಗುವ ಎಲ್ಲ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘವನ್ನು ಪ್ರಗತಿಯತ್ತ ಮುನ್ನಡೆಸಬೇಕು ಎಂದು ಸಲಹೆ ನೀಡಿದರು.

ನಿರ್ದೇಶಕರಾದ ಸಿ.ಕೆ.ಬೋರಯ್ಯ, ಸಿ.ಜೆ.ಕುಮಾರ, ಶಂಕರಗೌಡ, ವಿಜಯಕುಮಾರ್, ಉಮೇಶ್, ಗಂಗಾಧರ್, ನಿಂಗೇಗೌಡ, ಮುಖಂಡರಾದ ಶ್ರೀಧರ್, ಕುಶಾಲ್, ರಘು, ನಿರಂಜನ್ ಪಟೇಲ್, ಚನ್ನೇಗೌಡ, ನವೀನ್ ಪಟೇಲ್, ಜೋಗಿಗೌಡ, ಕೆಂಪೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net