

ಮಡಿಕೇರಿ:
ಕಾರು, ಜೀಪ್, ಜೆಸಿಬಿ, ಹಿಟಾಚಿ ಸೇರಿದಂತೆ ವಿವಿಧ ವಾಹನಗಳನ್ನು ಲೀಲಾಜಾಲವಾಗಿ ಚಲಾಯಿಸುವ 11 ವರ್ಷದ ಕಾವೇರಿಮನೆ ಚಂದನ್ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪಡೆದಿದ್ದಾನೆ.
ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಹಾಗೂ ನಗದು ಬಹುಮಾನವನ್ನು ಅ.12 ರಂದು ಮೈಸೂರಿನಲ್ಲಿ ಪ್ರದಾನ ಮಾಡಲಾಗುವುದು.
ವಾಹನ ಚಾಲನೆಯಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಚಂದನ್ ಎಲ್ಲಾ ರೀತಿಯ ವಾಹನಗಳನ್ನು ಯಶಸ್ವಿಯಾಗಿ ಚಲಾಯಿಸಿ ಸೈ ಅನ್ನಿಸಿಕೊಂಡಿದ್ದಾನೆ.
ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಚಂದನ್ ಮಡಿಕೇರಿ ತಾಲೂಕು ಅಯ್ಯಂಗೇರಿ ಗ್ರಾಮದ ಕಾವೇರಿಮನೆ ಭರತ್ ಮತ್ತು ಯೋಗಿತಾ ದಂಪತಿ ಪುತ್ರ