

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ದೇವರ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ಸೋಮವಾರ ದೇವಾಲಯದಲ್ಲಿ ಗಣಪತಿ ಹೋಮ, ಶತರುದ್ರಾಭಿಷೇಕ, ಸೀಯಾಳಾಭಿಷೇಕ, ಚಂಡಿಕಾ ಹೋಮ ನಡೆಯಿತು. ದೇವಳದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ನಡೆದ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ಅನ್ನಸಂತರ್ಪಣೆ ನಡೆಯಿತು.
ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ.ರಾಧಾಕೃಷ್ಣ ನಾಕ್, ಕಾರ್ಯನಿರ್ವಹಣಾಧಿಕಾರಿ ಚೆನ್ನಪ್ಪ ಗೌಡ, ಸಮಿತಿ ಸದಸ್ಯರಾದ ಹರೀಶ್ ಉಪಾಧ್ಯಾಯ, ಸೋಮನಾಥ, ಬಿ.ಗೋಪಾಲಕೃಷ್ಣ ರೈ, ಜಿ.ಕೃಷ್ಣ ರಾವ್ ಅರ್ತಿಲ, ಡಾ.ರಮ್ಯ ರಾಜಾರಾಮ್, ದೇವಿದಾಸ್ ಬಿ ರೈ, ಅನಿತಾ ಕೇಶವ ಗೌಡ, ಎಂ.ವೆಂಕಪ್ಪ ಪೂಜಾರಿ, ಪ್ರಮುಖರಾದ ಸಂಜೀವ ಗಾಣಿಗ, ಹರಿರಾಮಚಂದ್ರ, ಕಂಗ್ವೆ ವಿಶ್ವನಾಥ ಶೆಟ್ಟಿ, ಹರೀಶ್ ನಾಯಕ್ ನಟ್ಟಿಬೈಲ್, ಸ್ವರ್ಣೇಶ್, ಅಶೋಕ್ ಕುಮಾರ್ ರೈ, ಐ.ಚಿದಾನಂದ ನಾಯಕ್, ದೇವಿಪ್ರಸಾದ್ ಶೆಟ್ಟಿ, ಮೊದಲಾದವರು ಭಾಗವಹಿಸಿದ್ದರು.