ಚಂದ್ರಗುತ್ತಿ ದೇವಸ್ಥಾನ ಪ್ರವೇಶ ನಿಷೇಧ

16 smg 8
Published on

ಶಿವಮೊಗ್ಗ: ಕರೊನಾ ಎರಡನೇ ಅಲೆ ಅಬ್ಬರ ಜೋರಾಗಿರುವ ಕಾರಣ ಪುರಾತತ್ವ ಇಲಾಖೆ ಸೊರಬ ತಾಲೂಕಿನ ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರದ ಆದೇಶದಂತೆ ಪುರಾತತ್ವ ಇಲಾಖೆಯು ಶುಕ್ರವಾರದಿಂದ ಮುಂದಿನ ಆದೇಶದವರೆಗೂ ಭಕ್ತರು ಆಗಮಿಸುವುದನ್ನು ನಿಷೇಧಿಸಿದೆ.

ಪ್ರತಿನಿತ್ಯ ಸಾವಿರಾರು ಭಕ್ತರು ದೇವಿ ದರ್ಶನ ಪಡೆಯುತ್ತಿದ್ದರು. ಸೋಂಕು ಹೆಚ್ಚುತ್ತಿರುವ ಕಾರಣದಿಂದ ಪರಸ್ಪರ ಕರೊನಾ ಮಾರ್ಗಸೂಚಿಗಳನ್ನು ಪಾಲನೆ ಮಾಡುವುದು ಕಷ್ಟಸಾಧ್ಯವಾಗಿತ್ತು. ಹಾಗಾಗಿ ದೇವಸ್ಥಾನದ ಮುಂಭಾಗದಲ್ಲೇ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಳೆದ ವರ್ಷವೂ ಕರೊನಾ ಹೆಚ್ಚಾದ ಕಾರಣ ಸಾರ್ವಜನಿಕರ ಪ್ರವೇಶ ದೇವಸ್ಥಾನದಲ್ಲಿ ನಿರ್ಬಂಧಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net