

ಸರಗೂರು: ಪಟ್ಟಣ ಪಂಚಾಯಿತಿ ನಾಲ್ಕನೇ ವಾರ್ಡ್‌ನ ನೂತನ ಸದಸ್ಯರಾಗಿ ಚಂದ್ರಕಲಾ ರಾಜಣ್ಣ ಅವಿರೋಧವಾಗಿ ಅಯ್ಕೆಯಾಗಿದ್ದಾರೆ.
ಪಟ್ಟಣದ ನಾಲ್ಕನೇ ವಾರ್ಡಿನ ಸದಸ್ಯ ಎಸ್.ಎಲ್.ರಾಜಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ ಆದೇಶದ ಮೇರೆಗೆ ಮರು ಚುನಾವಣೆಯಲ್ಲಿ ಯಾರೂ ನಾಮಪತ್ರ ಸಲ್ಲಿಸಿದ ಕಾರಣ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಚಂದ್ರಕಲಾ ರಾಜಣ್ಣ ಅವರನ್ನು ಚುನಾವಣಾಧಿಕಾರಿ ಪುರುಷೋತ್ತಮ್ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಣೆ ಮಾಡಿದರು.
ಕಾಂಗ್ರೆಸ್ ಟೌನ್ ಅಧ್ಯಕ್ಷ ನಾಗರಾಜು ಮಾತನಾಡಿ, ವಾರ್ಡ್ ಸದಸ್ಯ ಎಸ್.ಎಲ್.ರಾಜಣ್ಣ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಸದಸ್ಯ ಸ್ಥಾನದ ಆಕಾಂಕ್ಷಿಯಾಗಿ ಚಂದ್ರಕಲಾ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅದರಂತೆ ನಾಲ್ಕನೇ ವಾರ್ಡಿನ ಜನರಿಗೆ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ಜನತೆ ಅಭಿವಂದನೆ ಎಂದರು.
ಪಪಂ ಸದಸ್ಯರಾದ ಶ್ರೀನಿವಾಸ, ಚೆಲುವ ಕೃಷ್ಣ, ಹೇಮಾವತಿ ರಮೇಶ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಅದಿಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ, ಕಾಂಗ್ರೆಸ್ ತಾಲೂಕು ಪ್ರಧಾನ ಕಾರ್ಯದರ್ಶಿ ಚೆಲುವರಾಜು, ಮುಖಂಡರಾದ ಬಿಲ್ಲಯ್ಯ , ಜವರಾಜಪ್ಪ, ಆಟೋ ರಮೇಶ್, ದೊಡ್ಡ ಬೈರ, ರಂಗಸ್ವಾಮಿ, ಚೆನ್ನಯ್ಯ, ಗೋಪಾಲಸ್ವಾಮಿ, ಸಿದ್ದರಾಜು, ರಾಜು, ಸಿದ್ದಪ್ಪ ಇದ್ದರು.