

ಮುಂಡಗೋಡ: ತಾಲೂಕಿನ ಕಾತೂರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಚಂದ್ರಕಾಂತ ಪಾಟೀಲ ಹಾಗೂ ಉಪಾಧ್ಯಕ್ಷೆಯಾಗಿ ಈರಮ್ಮ ದೊಡ್ಡಕಂತಿಮಠ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು. ಹನ್ನೆರಡು ಸದಸ್ಯರ ಪೈಕಿ ಎಂಟು ಸದಸ್ಯರು ಮಾತ್ರ ಚುನಾವಣೆ ಕಾರ್ಯದಲ್ಲಿ ಭಾಗವಹಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಚಂದ್ರಕಾಂತ ಪಾಟೀಲ ಹಾಗೂ ಗಣಪತಿ ಬದನಗೋಡ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷೆ ಸ್ಥಾನಕ್ಕೆ ಈರಮ್ಮ ದೊಡ್ಡ ಕಂತಿಮಠ ಒಬ್ಬರೇ ನಾಮಪತ್ರ ಸಲ್ಲಿಸಿದ ಪರಿಣಾಮ ಅವಿರೋಧವಾಗಿ ಆಯ್ಕೆಯಾದರು. ನಂತರ ನಡೆದ ಮತದಾನದಲ್ಲಿ ಐದು ಮತಗಳನ್ನು ಪಡೆದು ಚಂದ್ರಕಾಂತ ಅಧ್ಯಕ್ಷರಾಗಿ ಆಯ್ಕೆಯಾದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರಳ್ಳಿ, ನೀತಿನ್ ರಾಯ್ಕರ, ಪುರುಷೋತ್ತಮ, ಅಣ್ಣಪ್ಪ ಪಾಟೀಲ ಇತರರು ಉಪಸ್ಥಿತರಿದ್ದರು.