

ಹುಬ್ಬಳ್ಳಿ : ಇಲ್ಲಿನ ಉಣಕಲ್ನ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನವನ್ನು ಪ್ರವಾಸಿ ತಾಣವನ್ನಾಗಿಸುವ ನಿಟ್ಟಿನಲ್ಲಿ ನಗರದಲ್ಲಿ ಮಂಗಳವಾರ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನವನ್ನು ಮೇಲ್ದರ್ಜೆಗೇರಿಸಿ ಕಾರಿಡಾರ್ ನಿರ್ವಿುಸುವ ಕುರಿತು ಚಚಿರ್ಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ದೇವಸ್ಥಾನದ ಕಾರಿಡಾರ್ ನಿರ್ವಣಕ್ಕೆ ಪುರಾತತ್ವ ಇಲಾಖೆಯವರು ಶೀಘ್ರ ಎನ್ಒಸಿ ನೀಡುವಂತೆ ಸೂಚಿಸಿದರು.
ಈ ದೇವಸ್ಥಾನದ ಸೌಂದಯೀಕರಣಕ್ಕೆ 25 ಕೋಟಿ ರೂ. ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಆದಕಾರಣ, ಪುರಾತತ್ವ ಇಲಾಖೆ ಹಾಗೂ ಮಹಾನಗರ ಪಾಲಿಕೆ ಜಂಟಿ ಸಮೀಕ್ಷೆ ನಡೆಸಿ, ಬೆಂಗಳೂರಿನಲ್ಲಿ ಜು. 31ರಂದು ನಡೆಯುವ ಸಭೆಯಲ್ಲಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ಹುಬ್ಬಳ್ಳಿಯ ವಿಶ್ವೇಶ್ವರನಗರದಲ್ಲಿರುವ ರಕ್ಷಣಾ ಇಲಾಖೆಯ 7 ಎಕರೆ ಭೂಮಿ ಬದಲಾಗಿ ಬೊಮ್ಮಸಂದ್ರದಲ್ಲಿ 33 ಎಕರೆ ಭೂಮಿಯನ್ನು ರಕ್ಷಣಾ ಇಲಾಖೆಗೆ ನೀಡುವ ಕುರಿತು ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ತೀರ್ವನಿಸಲಾಗುವುದು ಎಂದು ತಿಳಿಸಿದರು.
ಉಣಕಲ್-ಸಾಯಿನಗರದ ಸಿಸಿ ರಸ್ತೆಗೆ ಸಂಬಂಧಿಸಿದಂತೆ 300 ಮೀಟರ್ ಬಾಕಿ ರಸ್ತೆಯ ಕಾಮಗಾರಿ ಮತ್ತು ಭೂಸ್ವಾಧೀನ ಪಡಿಸಿಕೊಂಡ ಫಲಾನುಭವಿಗಳಿಗೆ ಪರಿಹಾರದ ಮೊತ್ತವನ್ನು ಸಂದಾಯ ಮಾಡಿ, ಬೇಗನೆ ರಸ್ತೆ ಕಾಮಗಾರಿ ಮುಕ್ತಾಯಗೊಳಿಸುವಂತೆ ಶಾಸಕರು ಅಧಿಕಾರಿಗಳಿಗೆ ತಾಕಿತು ಮಾಡಿದರು.
ಬೀದಿದೀಪದ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಪಾಲಿಕೆ ಆಯುಕ್ತರು ಗಮನ ಹರಿಸುವಂತೆ ಸೂಚಿಸಿದರು.
ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಎಸಿ ಶಾಲಂ ಹುಸೇನ್, ಪುರಾತನ ತತ್ವ ಇಲಾಖೆಯ ಆಯುಕ್ತ ರಮೇಶ ಮೂಲಿಮನಿ, ಪಾಲಿಕೆ ಸದಸ್ಯರಾದ ಉಮೇಶಗೌಡ ಕೌಜಗೇರಿ, ಬೀರಪ್ಪ ಖಂಡೇಕಾರ, ಬಿಜೆಪಿಯ ರವಿ ನಾಯಕ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.