

ಬೆಂಗಳೂರು: ಕನ್ನಡ ಸಂಘರ್ಷ ಸಮಿತಿ ನೀಡುವ ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿ ಬಾ ಫುಲೆ ಪ್ರಶಸ್ತಿಗೆ ನಿವೃತ್ತ ಶಿಕ್ಷಕ ಹಾಗೂ ಕವಿ ಚಂದ್ರಶೇಖರ ಹಡಪದ ಆಯ್ಕೆ ಆಗಿದ್ದಾರೆ.
ಪ್ರಶಸ್ತಿಯು 5 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿದೆ. ಸೆ.8ರ ಭಾನುವಾರ ಬೆಳಗ್ಗೆ 11 ಗಂಟೆಗೆ ನರಸಿಂಹರಾಜ ಕಾಲೋನಿಯಲ್ಲಿರುವ ಬಿಎಂಶ್ರೀ ಕಲಾಭವನದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕಾರ್ಯಕ್ರಮವನ್ನು ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ ಉದ್ಘಾಟಿಸಲಿದ್ದು, ಪ್ರಶಸ್ತಿಯನ್ನು ಹಿರಿಯ ಕವಯತ್ರಿ ಕೆ. ಷರೀಫ ಪ್ರದಾನ ಮಾಡಲಿದ್ದಾರೆ. ಲೇಖಕ ರಾಮಣ್ಣ ಎಚ್ ಕೋಡಿಹೊಸಹಳ್ಳಿ ಕೂಡ ಉಪಸ್ಥಿತರಿರುತ್ತಾರೆ ಎಂದು ಸಮಿತಿಯ ಅಧ್ಯಕ್ಷ ಎ.ಎಸ್.ನಾಗರಾಜಸ್ವಾಮಿ ತಿಳಿಸಿದ್ದಾರೆ.