ಚಂದ್ರಯಾನ ಯಶಸ್ಸಿಗಾಗಿ ಬೆಳಗಾವಿ ಕಪಿಲೇಶ್ವರ ದೇವಸ್ಥಾನದಲ್ಲಿ ಮಹಾರುದ್ರಾಭಿಷೇಕ

IMG-20230823-WA0038.jpg
Published on

ಬೆಳಗಾವಿ: ಚಂದ್ರಯಾನ ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಇಳಿಯುವಂತೆ ಪ್ರಾರ್ಥಿಸಿ ಬೆಳಗಾವಿಯ ಕಪಿಲೇಶ್ವರ ಮಂದಿರದಲ್ಲಿ ಮಹಾರುಧ್ರಾಭಿಷೇಕ ಪೂಜೆ ನೆರವೇರಿಸಿದರು.

ವಿಶ್ವವೇ ಬೆರಗುಗಣ್ಣಿನಿಂದ ನೋಡುತ್ತಿರುವ ಚಂದ್ರಯಾನ ಚಂದ್ರನ ಕಕ್ಷೆಗೆ ಇಳಿಯಲು ಕ್ಷಣಗಣನೆ ಶುರುವಾಗಿದೆ. ದೇಶಾಧ್ಯಂತ ಇದು ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲಿ ಎಂದು ದೇವಸ್ಥಾನಗಳಲ್ಲಿ ಪ್ರಾರ್ಥಿಸಲಾಗುತ್ತಿದೆ. ಹಾಗಾಗಿ ದಕ್ಷಿಣಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಕಪಿಲೇಶ್ವರ ಮಂದಿರದಲ್ಲಿ ಆಡಳಿತ ಮಂಡಳಿ ವತಿಯಿಂದ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಅಲ್ಲದೇ ಸಾರ್ವಜನಿಕರು ಕೂಡ ದೇವರಲ್ಲಿ ಪ್ರಾರ್ಥಿಸಿದ್ದಾರೆ.

140 ಕೋಟಿ ಭಾರತೀಯರ ಬಯಕೆ ಈಡೇರಲೇಂದು ಕಪಿಲೇಶ್ವರ ದೇವರಿಗೆ ವಿಶೇಷವಾಗಿ ರುದ್ರಾಭಿಷೇಕ, ಶತರುದ್ರಾಭಿಷೇಕ, ಲಘುರುದ್ರಾಭಿಷೇಕ, ರುದ್ರಾಕ್ಷಿಭಿಷೇಕ, ಏಕಾದಶಿ ಪೂಜೆಗಳನ್ನು ಮಾಡಿದ್ದೇವೆ. ಚಂದ್ರಯಾನ-3 ವಿಕ್ರಮ ಲ್ಯಾಂಡ್ ಯಶಸ್ವಿಯಾಗಿ ಚಂದ್ರನ ಸ್ಪರ್ಶ ಮಾಡಲಿ. ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತಾಗಲಿ. ಇದರಲ್ಲಿ ನಮ್ಮ ಬೆಳಗಾವಿಯ ಇಬ್ಬರು ವಿಜ್ಞಾನಿಗಳು ಕೈ ಜೋಡಿಸಿರುವುದು ಹೆಮ್ಮೆಯ ಸಂಗತಿ ಎಂದು ದೇವಸ್ಥಾನದ ಅರ್ಚಕ ನಾಗರಾಜ ಕಟ್ಟಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net