ಅಂತರಿಕ್ಷ ಸಂಶೋಧನೆ ಹೊಸ ಯುಗಕ್ಕೆ ನಾಂದಿ

JOSHI NEW
Published on

ಹುಬ್ಬಳ್ಳಿ : ಚಂದ್ರನ ದಕ್ಷಿಣ ದ್ರುವದ ಮೇಲೆ ಹೆಜ್ಜೆ ಇಟ್ಟ ಪ್ರಪಂಚದ ಪ್ರಥಮ ದೇಶ ಭಾರತ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಚಂದ್ರಯಾನ-3 ಯಶಸ್ಸನ್ನು ಬಣ್ಣಿಸಿದ್ದಾರೆ.

ವಿಜ್ಞಾನಿಗಳ ಹಲವಾರು ವರ್ಷಗಳ ಶ್ರಮ ಹಾಗೂ ಕೋಟ್ಯಾಂತರ ಭಾರತೀಯರ ಪ್ರಾರ್ಥನೆಯ ಫಲವಾಗಿ ಇಂದು ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಈ ಮೂಲಕ ಅಂತರಿಕ್ಷ ಸಂಶೋಧನೆಯ ಕ್ಷೇತ್ರದಲ್ಲಿ ಹೊಸ ಯುಗಕ್ಕೆ ನಾಂದಿ ಹಾಡಿದೆ. ಇದೊಂದು ಅಮೃತ ಭಾರತದ ಅಮೃತ ಘಳಿಗೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಚಂದ್ರಯಾನದ ಯಶಸ್ವಿ ಲ್ಯಾಂಡಿಗ್ ಪ್ರಕ್ರಿಯೆ ವೀಕ್ಷಿಸಿದೆ. ನಿಜಕ್ಕೂ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ, ಇಸ್ರೋ ವಿಜ್ಞಾನಿಗಳ ನಿರಂತರ ಪರಿಶ್ರಮಕ್ಕೆ ಬಿಗ್ ಸೆಲ್ಯೂಟ್ ಎಂದು ಸಚಿವ ಜೋಶಿಯವರು ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತ ಅಂದುಕೊಂಡಂತೆ ಈ ಯೋಜನೆಯಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚಂದ್ರನ ಮೇಲೆ ಲ್ಯಾಂಡರ್ ಇಳಿಸಿದ 4 ಗಣ್ಯ ರಾಷ್ಟ್ರಳ ಸಾಲಿಗೆ ಭಾರತ ಕೂಡ ಸೇರ್ಪಡೆ ಆಗಿದೆ.

ಇಸ್ರೋ ಯಾವುದೇ ಭಯವಿಲ್ಲದೆ ಚಂದ್ರನ ದಕ್ಷಿಣ ಧ್ರುವಕ್ಕೆ ನುಗ್ಗಿ ತನ್ನ ಲ್ಯಾಂಡರ್ ಅನ್ನ ಯಶಸ್ವಿಯಾಗಿ ಇಳಿಸಿದೆ. ಚಂದ್ರನ ಮೇಲೆ ಲ್ಯಾಂಡರ್ ಇಳಿಸುವ ಮೂಲಕ ಬಾಹ್ಯಾಕಾಶ ಲೋಕಕ್ಕೆ ಭಾರತ ದೊರೆ ಎಂಬುದನ್ನು ಇಸ್ರೋ ಸಂಸ್ಥೆ ಮತ್ತೆ ಜಗತ್ತಿಗೆ ಸಾರಿ ಹೇಳಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net