ಚಂದ್ರಿಕಾ ನವಲೆಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

8 Dwd 4 (Chandrika Navale)
Published on

ಧಾರವಾಡ: ತಾಲೂಕಿನ ಮಾರಡಗಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಚಂದ್ರಿಕಾ ನವಲೆ ಅವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರಶಸ್ತಿಗೆ ಭಾಜನರಾಗಿದ್ದು, ತಾಲೂಕು ಮಟ್ಟದ ಶಿಕ್ಷಕ ದಿನೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಶಿಕ್ಷಕರು ಪ್ರಶಸ್ತಿಗೆ ಅರ್ಜಿ ಹಾಕದೆ, ಧಾರವಾಡ ಗ್ರಾಮೀಣ ಬಿಇಒ ರಾಮಕೃಷ್ಣ ಸದಲಗಿ ಅವರೇ ಶಿಕ್ಷಕರ ಬೋಧನಾ ಕೌಶಲ್ಯ ಮತ್ತು ಮಕ್ಕಳಿಗಾಗಿ ಶಾಲೆಯಲ್ಲಿ ಕೈಕೊಂಡ ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು ಪರಿಗಣಿಸಿ ಚಂದ್ರಿಕಾ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಬಾರಿಯ ವಿಶೇಷ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net