

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆ.30 ರಂದು ಗೃಹಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮದ ಅಂಗವಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರದ ಮಾರ್ಗ ಬದಲಾವಣೆ ಹಾಗೂ ಖಾಸಗಿ ವಾಹನಗಳ ಸಂಚಾರ ಮತ್ತು ನಿಲುಗಡೆಗೆ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.
ಕಾರ್ಯಕ್ರಮಕ್ಕೆ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಫಲಾನುಭವಿಗಳು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಸುಗಮ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ವಾಹನಗಳ ಸಂಚಾರದ ಮೇಲೆ ನಿರ್ಬಂಧ ವಿಧಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಬದಲಿ ಮಾರ್ಗ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ರಸ್ತೆಗಳಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಹಳೆಯ ಡಿಸಿ ಕಚೇರಿ ಆರ್ಚ್ ಗೇಟ್ ಜಂಕ್ಷನ್‌ನಿಂದ ಕೋರ್ಟ್ ಜಂಕ್ಷನ್‌ವರೆಗಿನ ಕೆಆರ್‌ಬಿ ರಸ್ತೆಯ ಎರಡು ಕಡೆಗಳಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಹಾಗೂ ವಾಹನಗಳ ನಿಲುಗಡೆಯನ್ನು ನಿರ್ಬಧಿಂಸಿದೆ. ಸೇಂಟ್ ಜೋಸೆಫ್ ಜಂಕ್ಷನ್‌ನಿಂದ ಮೆಟ್ರೋಪೋಲ್ ವೃತ್ತದವರೆಗಿನ ಹುಣಸೂರು ರಸ್ತೆಯ ಎರಡು ಕಡೆಗಳಲ್ಲಿ ಸಂಚರಿಸುವ ಎಲ್ಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.