ಹೊಳೆನರಸೀಪುರದಲ್ಲಿ ಪಟಾಕಿ ಅಂಗಡಿಗಳ ಸ್ಥಳ ಬದಲಾವಣೆ

30.1
ಹೊಳೆನರಸೀಪುರದ ಅಗ್ನಿಶಾಮಕ ಠಾಣೆ ಪಕ್ಕದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಈ ಬಾರಿ ಪಟಾಕಿ ಅಂಗಡಿಗಳನ್ನು ತೆರೆದಿರುವುದು.
Published on

ಹೊಳೆನರಸೀಪುರ: ದೀಪಾವಳಿ ಹಬ್ಬದ ಪ್ರಯುಕ್ತ ಪಟ್ಟಣದಲ್ಲಿ ಪಟಾಕಿ ಅಂಗಡಿಗಳ ಸ್ಥಳವನ್ನು ಈ ಬಾರಿ ಬದಲಾವಣೆ ಮಾಡಲಾಗಿದೆ.

ಪ್ರತಿವರ್ಷ ಬಯಲು ರಂಗಮಂದಿರದ ಆವರಣದಲ್ಲಿ ಅವಕಾಶ ಕಲ್ಪಿಸಲಾಗುತ್ತಿತ್ತು. ಈ ಬಾರಿ ಬಯಲು ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿರುವುದರಿಂದ ಪಟಾಕಿ ಅಂಗಡಿಗಳ ಸ್ಥಳ ಬದಲಾವಣೆ ಮಾಡಲಾಗಿದೆ ಎಂದು ತಹಸೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಹಾಗೂ ಪುರಸಭೆ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ತಿಳಿಸಿದ್ದರು.

ಅದರಂತೆ ಅರಕಲಗೂಡು ರಸ್ತೆ ಅಗ್ನಿಶಾಮಕ ಠಾಣೆ ಪಕ್ಕದಲ್ಲಿ ನೂತನವಾಗಿ ನಿರ್ಮಿಸಿರುವ ಮಾರುಕಟ್ಟೆ ಪ್ರದೇಶದಲ್ಲಿ ಮಂಗಳವಾರದಿಂದ ಪಟಾಕಿ ಅಂಗಡಿಗಳನ್ನು ತೆರೆದಿದ್ದು ನವೆಂಬರ್ 2ರವರೆಗೂ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ 10ಕ್ಕೂ ಹೆಚ್ಚು ಅಂಗಡಿಗಳು ತೆರೆದಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net