ಹಾಮೋರ್ನ್​ಗಳ ಬದಲಾವಣೆಯಿಂದ ಮಾನಸಿಕ, ದೈಹಿಕ ಸ್ಥಿತಿಯಲ್ಲಿ ಬದಲಾವಣೆ

Changes in mental and physical state due to hormonal changes
Published on

ವಿಜಯಪುರ:ಮಹಿಳೆಯರ ಋತುಚಕ್ರ ಅಥವಾ ಮುಟ್ಟಾಗುವುದು ಒಂದು ನೈಸರ್ಗಿಕ ಪ್ರಕ್ರಿಯೆ. ಪ್ರೌಢಾವಸ್ಥೆಗೆ ಬಂದಾಗ ಪ್ರತಿಯೊಬ್ಬ ಮಹಿಳೆಯೂ ಕೂಡಾ ಈ ಹಂತ ದಾಟಲೇಬೇಕು. ಈ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತೀ ಮುಖ್ಯ ಎಂದು ಭಾರತೀಯ ಕುಟುಂಬ ಯೋಜನಾ ಸಂದ ವೈದ್ಯಾಧಿಕಾರಿ ಡಾ. ಅನುರಾಧಾ ಜೋಶಿ ಸಲಹೆ ನೀಡಿದರು.

ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗ ಹಾಗೂ ಮಮದಾಪುರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯಗಳ ಸಂಯುಕ್ತಾಶ್ರಯ ಹಾಗೂ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ (ಪಿಎಂ ಉಷಾ) ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅನುದಾನದ ನೆರವಿನೊಂದಿಗೆ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹಿಳೆಯರ ಋತುಚಕ್ರ ಆರ್ಯೋಗದ ಕುರಿತು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮುಟ್ಟಿನ ದಿನಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದಿದ್ದರೆ ಹಲವು ಬ್ಯಾಕ್ಟೀರಿಯಾ ಉತ್ಪತ್ತಿಯಾಗಿ ಸೋಂಕು ಹರಡುವುದರ ಜತೆಗೆ ಮಾರಣಾಂತಿಕ ಕಾಯಿಲೆಗಳಿಗೆ ಒಳಗಾಗುವ ಸಾಧ್ಯತೆಗಳಿವೆ. ಋತುಚಕ್ರದ ಸಂದರ್ಭದಲ್ಲಿ ಮಹಿಳೆಯರ ದೇಹದಲ್ಲಿ ಹಾಮೋರ್ನ್​ಗಳಲ್ಲಿ ಕಂಡು ಬರುವ ಬದಲಾವಣೆಗಳು ಮಹಿಳೆಯರಲ್ಲಿ ಹಲವು ರೀತಿಯ ಮಾನಸಿಕ ಹಾಗೂ ದೈಹಿಕ ಸಮೆಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇಂತಹ ಸಮಯದಲ್ಲಿ ತೊಂದರೆಗಳನ್ನು ಸಮಚಿತ್ತದಿಂದ ನಿಭಾಯಿಸಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಶಿವಾನಂದ ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳು ಮುಟ್ಟಿನ ಆರೋಗ್ಯದ ಬಗ್ಗೆ ಕಾರ್ಯಾಗಾರದಲ್ಲಿ ಅರಿತುಕೊಂಡಿರುವ ಸಂಗತಿಗಳನ್ನು ಸದುಪಯೋಗ ಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಪ್ರೊ. ಜಿ.ಬಿ. ಸೋನಾರ ಮಾತನಾಡಿದರು. ಎಸ್​.ಎಸ್​. ಮೇತ್ರಿ, ಡಾ. ಪ್ರಕಾಶ ಹಡಪದ, ರುಕ್ಸಾನ್​ ಎಫ್​. ಮತ್ತಿತರರಿದ್ದರು.

ಬಬಲೇಶ್ವರ ತಾಲೂಕಿನ ಮಮದಾಪುರದ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮಹಿಳೆಯರ ಋತುಚಕ್ರ ಆರ್ಯೋಗದ ಕುರಿತು ಕಾರ್ಯಾಗಾರವನ್ನು ಡಾ. ಅನುರಾಧಾ ಜೋಶಿ ಉದ್ಘಾಟಿಸಿದರು. ಡಾ. ಶಿವಾನಂದ ಹಿರೇಮಠ, ಜಿ.ಬಿ. ಸೋನಾರ, ಎಸ್​.ಎಸ್​. ಮೇತ್ರಿ ಮತ್ತಿತರರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net