ಚನ್ನಬಸವ ಶಿವಯೋಗಿ ಲಿಂಗೈಕ್ಯ ಶತಮಾನೋತ್ಸವ

24Manju2
ಬೆಳಗಾವಿ ನಾಗನೂರುಮಠದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಭುಚನ್ನಬಸವ ಸ್ವಾಮೀಜಿ, ಮಾತನಾಡಿದರು. ಡಾ.ಅಲ್ಲಮಪ್ರಭು ಸ್ವಾಮೀಜಿ, ಮುದುಗಲ್ಲ ಮಹಾಂತ ಸ್ವಾಮೀಜಿ ಇದ್ದರು.
Published on

ಬೆಳಗಾವಿ: ಚನ್ನಬಸವ ಶಿವಯೋಗಿ ಅವರ ಲಿಂಗೈಕ್ಯ ಶತಮಾನೋತ್ಸವ 2025 ಜನವರಿ 10 ರಿಂದ 13ರ ವರೆಗೆ ಜರುಗಲಿದ್ದು, ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸಮಾಜ ಸೇವಾಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಅಥಣಿ ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ತಿಳಿಸಿದರು.

ನಗರದ ನಾಗನೂರು ರುದ್ರಾಕ್ಷಿಮಠದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 10 ರಂದು ಬೆಳಗ್ಗೆ 9 ಗಂಟೆಗೆ ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ ಷಟಸ್ಥಲ್ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಶತಮಾನೋತ್ಸವ ಕಾರ್ಯಕ್ರಮ ಆರಂಭಗೊಳ್ಳಲಿದೆ. ಸಂಜೆ 6 ಗಂಟೆಗೆ ಬಸವ ಚರಿತಾಮೃತ ಪ್ರವಚನ ಮಂಗಲೋತ್ಸವ ಜರುಗಲಿದೆ. ಕಲಬುರ್ಗಿ ಶ್ರೀಶೈಲಂ ಜಗದ್ಗುರು ಸಾರಂಗಮಠದ ಡಾ.ಜಗದ್ಗುರು ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಬಳ್ಳಾರಿ ಹೊಸಪೇಟೆ ಹಾಲಕೇರಿ ಕೊಟ್ಟೂರಸ್ವಾಮಿ ಸಂಸ್ಥಾನಮಠದ ಜಗದ್ಗುರು ಕೊಟ್ಟೂರು ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಜ.11 ರಂದು ಬೆಳಗ್ಗೆ 10.30ಕ್ಕೆ ಲಿಂ. ಚನ್ನಬಸವ ಶಿವಯೋಗಿ ಶತಮಾನೋತ್ಸವವನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಶಿವರಾಜ ಪಾಟೀಲ್ ಉದ್ಘಾಟಿಸುವರು.

ಸುತ್ತೂರು ಜಗದ್ಗುರು ವೀರ ಸಿಂಹಾಸನ ಸಂಸ್ಥಾನಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರು ಸಿದ್ದಗಂಗಾ ಮಹಾಮಠದ ಸಿದ್ದಲಿಂಗ ಸ್ವಾಮೀಜಿ, ಗದುಗಿನ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ, ಶಿವಮೊಗ್ಗ ಆನಂದಪುರಂ ಜಗದ್ಗುರು ಮುರುಘಾಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಶಿರಹಟ್ಟಿ ಫಕೀರೇಶ್ವರ ಸಂಸ್ಥಾನಮಠದ ಫಕೀರ ಸಿದ್ದರಾಮ ಸ್ವಾಮೀಜಿ, ಮಹಾರಾಷ್ಟ್ರ ನಾಂದಣಿಯ ಕ್ಷೇತ್ರ ಜೈನಮಠದ ಸ್ವಸ್ತಿ ಜಿನಸೇನ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಹಾಗೂ ಉತ್ತರಹಳ್ಳಿ ಅವಧೂತ ಪೀಠದ ಅವಧೂತ ವಿನಯ ಗುರೂಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ಲಕ್ಷ್ಮಣ ಸವದಿ ಸೇರಿ ಗಣ್ಯರು ಭಾಗವಹಿಸಲಿದ್ದಾರೆ.

ಜ.12ರಂದು ಬೆಳಗ್ಗೆ 10.30ಕ್ಕೆ ಗಡಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ ಜರುಗಲಿದೆ. ಭಾಲ್ಕಿ ಹಿರೇಮಠ ಸಂಸ್ಥಾನಮಠದ ಡಾ.ಬಸವಲಿಂಗ ಪಟ್ಟದೇವರು, ಸಾಣೆಹಳ್ಳಿ ತರಳಬಾಳು ಬೃಹನ್ಮಠದ ಡಾ.ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ, ಧಾರವಾಡ ಮುರುಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ, ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಜ.13 ರಂದು ಬೆಳಗ್ಗೆ 9.30ಕ್ಕೆ ಧರ್ಮಗುರು ಬಸವಾದಿ ಬ್ರಹ್ಮತರ ಭಾವಚಿತ್ರ, ಧರ್ಮ ಗ್ರಂಥ ವಚನ ಸಾಹಿತ್ಯ ಮತ್ತು ಗುರು ಚನ್ನಬಸವ ಶಿವಯೋಗಿಗಳವರ ಭಾವಚಿತ್ರ ಹಾಗೂ ವಚನ ಪಲ್ಲಕ್ಕಿ ಉತ್ಸವ ಜರುಗಲಿದೆ. ಸಂಜೆ 6.30 ಗಂಟೆಗೆ ಅಥಣಿಶರ ಸಮಾಜ ಸೇವಾ ಕಾಯಕದ ಬೆಳ್ಳಿಹಬ್ಬ ಜರುಗಲಿದೆ. ನಿಡಸೋಸಿ ಸಿದ್ಧ ಸಂಸ್ಥಾನಮಠದ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ನಾಲವಾರ ಕೋರಿ ಸಿದ್ದೇಶ್ವರ ಸಂಸ್ಥಾನಮಠದ ಸಿದ್ಧ ತೊಂಟೇಂದ್ರ ಶಿವಾಚಾರ್ಯ ಸ್ವಾಮೀಜಿ, ಮುಗಳಖೋಡ ಸದ್ಗುರು ಯಲ್ಲಾಲಿಂಗೇಶ್ವರ ಮಠದ ಡಾ.ಮುರುಘರಾಜೇಂದ್ರ ಸ್ವಾಮೀಜಿ, ಬೈಲೂರು ತೋಂಟದಾರ್ಯಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net