ಚನ್ನಬಸವೇಶ್ವರ ಸ್ವಾಮಿ ರಥೋತ್ಸವ ಸಂಪನ್ನ

26sor1
ಸೊರಬ ತಾಲೂಕಿನ ಗುಂಡಶೆಟ್ಟಿಕೊಪ್ಪದ ಶ್ರೀ ಚನ್ನಬಸವೇಶ್ವರ ಸ್ವಾಮಿಯ ಮಹಾರಥೋತ್ಸವ ಅದ್ದೂರಿಯಾಗಿ ನಡೆಯಿತು.
Published on

ಸೊರಬ: ತಾಲೂಕಿನ ಗುಂಡಶೆಟ್ಟಿಕೊಪ್ಪದ ಗ್ರಾಮದ ಶ್ರೀ ಚನ್ನಬಸವೇಶ್ವರ ಸ್ವಾಮಿಯ ಮಹಾರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣಿಯಿಂದ ಜರಗಿತು.

ಜಾತ್ರೆ ನಿಮಿತ್ತ ಗಣ ಹೋಮ, ನವಗ್ರಹ ಹೋಮ, ವಾಸ್ತು ಪೂಜೆ, ರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು. ವಿಶೇಷ ಪೂಜೆಯ ಬಳಿಕ ಸ್ವಾಮಿಯ ಉತ್ಸವ ಮೂರ್ತಿಯ ರಥಾರೋಹಣ, ಮಹಾ ಮಂಗಳಾರತಿ ನಡೆಯಿತು. ಬಳಿಕ ಮಹಾರಥೋತ್ಸವ ಸಾಂಗವಾಗಿ ನೆರವೇರಿತು. ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಯಿತು.
ತಾಲೂಕಿನ ವಿವಿಧಡೆಯಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net