ಸಂಭ್ರಮದ ಆಂಜನೇಯ ಸ್ವಾಮಿ ರಥೋತ್ಸವ

Channagiri, Anjaneya Swami, Rathotsava,
Published on

ಚನ್ನಗಿರಿ: ತಾಲೂಕಿನ ವಡ್ನಾಳು ಬನ್ನಿಹಟ್ಟಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಭ್ರಮದಿಂದ ಜರುಗಿತು.

ಗ್ರಾಮದೆಲ್ಲೆಡೆ ಬಾಳೆಕಂದುಗಳಿಂದ ಅಲಂಕರಿಸಲಾಗಿತ್ತು. ದೇವಸ್ಥಾನದಲ್ಲಿ ದೇವರಿಗೆ ಹೂಗಳಿಂದ ಅಲಂಕರಿಸಿ ಪೂಜೆ ನೆರವೇರಿಸಲಾಯಿತು. ರಥೋತ್ಸವದ ಅಂಗವಾಗಿ ದೇವರಿಗೆ ಅಭಿಷೇಕ, ಪುಣ್ಯಾಹ, ಅಂಕುರದರ್ಪಣ, ಅಷ್ಟವದನ ಸೇವೆ, ರಕ್ಷಾಬಂಧನ ಹಾಗೂ ಪಲ್ಲಕ್ಕಿ ಉತ್ಸವಗಳನ್ನು ನಡೆಸಲಾಯಿತು.

ದೇವರ ಕಳಸ ಸ್ಥಾಪನೆ, ಧ್ವಜಾರೋಹಣ, ನವಗ್ರಹ ಸ್ಥಾಪನೆ, ಗಜೇಂದ್ರೋತ್ಸವ ಕಾರ್ಯಕ್ರಮ ನಡೆಸಲಾಯಿತು. ರಥದ ಪೂಜೆ, ರಥಾಂಗಹೋಮ, ಬಲಿದಾನ ನಡೆಸಿ ನಂತರ ರಥೋತ್ಸವ ನಡೆಸಲಾಯಿತು. ಭಕ್ತರಿಗೆ ಪಾನಕ, ಕೋಸಂಬರಿ ಪ್ರಸಾದ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net