ಸಭೆಗೆ ಜನ ಸ್ಪಂದನೆಯೇ ಇಲ್ಲ

CHANNAGIRI TP
Published on

ಚನ್ನಗಿರಿ: ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಬಗೆಹರಿಸುವ ಉದ್ದೇಶದಿಂದ ಸೋಮವಾರ ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿದ್ದ ಜನಸ್ಪಂದನ ಸಭೆಯತ್ತ ಸಾರ್ವಜನಿಕರು ಸುಳಿಯಲೇ ಇಲ್ಲ.

ಜಿಲ್ಲಾಧಿಕಾರಿ ಆದೇಶದಂತೆ ಪ್ರತಿ ಸೋಮವಾರ ಜನಸ್ಪಂದನ ಹಮ್ಮಿಕೊಳ್ಳಲಾಗುತ್ತಿದೆ. ಆದರೆ, ಇಂದಿನ ಕಾರ್ಯಕ್ರಮಕ್ಕೆ ಒಂದೇ ಒಂದು ಅರ್ಜಿ ಸಲ್ಲಿಕೆಯಾಗಲಿಲ್ಲ. ಇದರಿಂದ ಅಧಿಕಾರಿಗಳು ಸುಮ್ಮನೆ ಕುಳಿತು ಸಭೆ ಮುಗಿಸಿಕೊಂಡು ಕಚೇರಿಗೆ ವಾಪಸಾದರು.

ತಾಪಂ ಇಒ ಎಂ.ಆರ್.ಪ್ರಕಾಶ್ ಮಾತನಾಡಿ, ಜನರು ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸಲು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ತಾಪಂನಲ್ಲಿ ಇದು ಮೂರನೇ ಸಭೆ. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಳ್ಳಲಾಗಿದೆ. ಆದರೂ ಜನರು ಅಹವಾಲು ಹೇಳಿಕೊಳ್ಳಲು ಮುಂದೆ ಬಂದಿಲ್ಲ ಎಂದರು.

ಮುಖ್ಯಾಧಿಕಾರಿ ಬಸವರಾಜ್ ಐಗೂರು, ಕ್ಷೇತ್ರ ಶಿಕ್ಷಾಣಾಧಿಕಾರಿ ಕೆ.ಮಂಜುನಾಥ್, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net