ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ, ಬಂಗಾರ ವಶ

Channagiri, Police, Hundi, Theft,
Published on

ಮನೆ, ದೇಗುಲದ ಹುಂಡಿ ಹಣ ಕದ್ದಿದ್ದ ಇಬ್ಬರ ಬಂಧನ I ಬಸವಾಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ

ಚನ್ನಗಿರಿ: ತಾಲೂಕಿನ ಹರೋಸಾಗರ, ಕೋಟೆಹಾಳ್ ಗ್ರಾಮದಲ್ಲಿ ಮನೆ ಮತ್ತು ದೇವಸ್ಥಾನಗಳ ಹುಂಡಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಸವಾಪಟ್ಟಣ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಸವಾಪಟ್ಟಣ ಗ್ರಾಮದ ಸಂಜಯ್ ಹಾಗೂ ಮಂಜುನಾಥ್ ಬಂಧಿತರು. ಆರೋಪಿಗಳಿಂದ 10ಲಕ್ಷ ರೂ. ಮೌಲ್ಯದ ಬೆಳ್ಳಿ, ಬಂಗಾರ ಹಾಗೂ 2.50 ಲಕ್ಷ ಮೌಲ್ಯದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಬಸವಾಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳ ವಿರುದ್ಧ ಈಗಾಗಲೇ ಬಸವಾಪಟ್ಟಣದಲ್ಲಿ 3, ಸಂತೇಬೆನ್ನೂರಲ್ಲಿ 2 ಹಾಗೂ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ. ಸಂತೋಷ್ ಹಾಗೂ ಜಿ. ಮಂಜುನಾಥ, ಚನ್ನಗಿರಿ ಎಎಸ್‌ಪಿ ಸ್ಯಾಮ್ ವರ್ಗೀಸ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net