

ಯಲಬುರ್ಗಾ: ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿಯನ್ನು ತಾಲೂಕಾಡಳಿತದಿಂದ ಸರಳವಾಗಿ ಆಚರಿಸಲಾಗುವುದು. ಸಮಾಜದರು ಸಹಕಾರ ನೀಡಬೇಕು ಎಂದು ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಹೇಳಿದರು.
ಪಟ್ಟಣದ ತಹಸಿಲ್ ಕಚೇರಿಯಲ್ಲಿ ತಾಲೂಕಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಅ.23ರಂದು ತಹಸಿಲ್ ಕಚೇರಿಯಲ್ಲಿ ಚನ್ನಮ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಗರದ ವೀರರಾಣಿ ಕಿತ್ತೂರ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು ಎಂದರು.
ಪಂಚಮಸಾಲಿ ಸಮಾಜದ ಜಿಲ್ಲಾ ಉಪಾಧ್ಯಕ್ಷ ವೀರಣ್ಣ ಹುಬ್ಬಳ್ಳಿ ಮಾತನಾಡಿ, ಸಮಾಜದ ಹಾಗೂ ತಾಲೂಕಾಡಳಿತ ಸಹಯೋಗದಲ್ಲಿ ನ.5ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಅದ್ದೂರಿಯಾಗಿ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಮಾಜದ ತಾಲೂಕಾಧ್ಯಕ್ಷ ಕೆ.ಜಿ.ಪಲ್ಲೇದ, ತಾಪಂ ಇಒ ನೀಲಗಂಗಮ್ಮ ಬಬಲಾದಿ, ಮುಖ್ಯಾಧಿಕಾರಿ ನಾಗೇಶ, ಶಿರಸ್ತೇದಾರ್ ದೇವರಡ್ಡಿ, ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ಸದಸ್ಯರಾದ ರೇವಣೆಪ್ಪ ಹಿರೇಕುರುಬರ, ಪ್ರಮುಖರಾದ ಶೇಖರಗೌಡ ಉಳ್ಳಾಗಡ್ಡಿ, ಅಮರೇಶ ಹುಬ್ಬಳ್ಳಿ, ಶರಣಪ್ಪ ಕೊಪ್ಪಳ, ಶಿವನಗೌಡ ನಾಗನಗೌಡ್ರ ಇತರರಿದ್ದರು.