ಓಜನಳ್ಳಿಯಲ್ಲಿ ಚನ್ನಮ್ಮ ಪುತ್ಥಳಿ ಅನಾವರಣ: ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಕರಿಯಪ್ಪ ಮಾಹಿತಿ

KARIYAPPA METI
Published on

ಕೊಪ್ಪಳ: ತಾಲೂಕಿನ ಓಜನಳ್ಳಿ ಗ್ರಾಮದಲ್ಲಿ ಮಾ.5ರಂದು ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಪುತ್ಥಳಿ ಅನಾವರಣ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಕರಿಯಪ್ಪ ಮೇಟಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪುತ್ಥಳಿ ಅನಾವರಣಕ್ಕೂ ಮುನ್ನ ಮೆರವಣಿಗೆ ನಡೆಯಲಿದೆ. ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದಾರೆ. ಸಚಿವ ಮುರುಗೇಶ ನಿರಾಣಿ ಉದ್ಘಾಟಿಸಲಿದ್ದಾರೆ. ಸಚಿವರಾದ ಸಿ.ಸಿ.ಪಾಟೀಲ್, ಶಂಕರ ಪಾಟೀಲ್ ಮುನೇನಕೊಪ್ಪ, ಗೋವಿಂದ ಕಾರಜೋಳ, ಆನಂದ ಸಿಂಗ್, ಹಾಲಪ್ಪ ಆಚಾರ್ ಭಾಗವಹಿಸಿಲಿದ್ದಾರೆ ಎಂದು ತಿಳಿಸಿದರು.

ಗ್ರಾಮದ ರುದ್ರಗೌಡ ವಿರುಪನಗೌಡ ಜಂತ್ಲಿ ಜಮೀನನಲ್ಲಿ ಸಂಜೆ 5 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಸಾಧಕರನ್ನು ಸನ್ಮಾನಿಸಲಾಗುವುದು. ಸಂಸದ ಸಂಗಣ್ಣ ಕರಡಿ ಸೇರಿ ಜಿಲ್ಲೆಯ ಶಾಸಕರು, ಇತರ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಸಮುದಾಯ ಮುಖಂಡರಾದ ಬಸವನಗೌಡ, ವೀರಣ್ಣ ಅಣ್ಣಿಗೇರಿ, ಕಳಕನಗೌಡ ಪಾಟೀಲ್, ದೇವರಾಜ ಹಾಲಸಮುದ್ರ, ಬಸವರಾಜ ಇಂದರಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net