ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಶೇಖರ್ ಲಾಡ್, ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈಗಾಗಲೇ ನಮ್ಮ ಶಾಖೆ ವತಿಯಿಂದ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಮುಂದಿನ ದಿನಗಳ ತಮ್ಮ ಅಧಿಕಾರದ ಅವಧಿಯಲ್ಲೂ ಸಹ ಹೆಚ್ಚಿನ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.