

ಚನ್ನಪಟ್ಟಣ: ಕೆರೆ ಕೋಡಿ ವೀಕ್ಷಣೆಗೆ ಹೋಗಿದ್ದ ಯುವಕ ಕಾಲುಜಾರಿ ಬಿದ್ದು ಮೃತಪಟ್ಟಿರುವುದು ತಾಲೂಕಿನ ನೀಲಸಂದ್ರ ಗ್ರಾಮದಲ್ಲಿ ಗುರುವಾರ ನಡೆದಿದೆ. ತಾಲೂಕಿನ ತಿಮ್ಮಸಂದ್ರ ಗ್ರಾಮದ ಸಿಜೇಂದ್ರ (21) ಮೃತ ಯುವಕ. ಪೇಂಟಿಂಗ್ ಕೆಲಸ ಮಾಡುತ್ತಿದ್ದ ಈತ ಸೋಮವಾರ ಕೆರೆ ಭರ್ತಿಯಾಗಿ ಕೋಡಿ ಹರಿಯುತ್ತಿರುವುದನ್ನು ನೋಡಿ ಬರುವುದಾಗಿ ಹೇಳಿ ಹೋದವನು ಮನೆಗೆ ವಾಪಸಾಗಿರಲಿಲ್ಲ. ಆತಂಕಗೊಂಡ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮಂಗಳವಾರ ಯುವಕನ ಮೃತದೇಹವನ್ನು ಮಂಗಳವಾರ ಪತ್ತೆಹಚ್ಚಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.