ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಸೂಚನೆ

25Anand4
Published on

ಬೆಳಗಾವಿ:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿಶೇಷ ಪ್ರಯತ್ನದಿಂದ ರಸ್ತೆ ಕಾಮಗಾರಿಗೆ ಅನುದಾನ ಮಂಜೂರಾಗಿದೆ. ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವ ಮೂಲಕ ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಗುತ್ತಿಗೆದಾರರಿಗೆ ವಿಪ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೂಚಿಸಿದರು.

ಗ್ರಾಮೀಣ ಕ್ಷೇತ್ರದ ಸುಳಗಾ ಗ್ರಾಮದಲ್ಲಿ ಮಂಗಳವಾರ ರಸ್ತೆ ನಿರ್ಮಾಣದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಯುವರಾಜ ಕದಂ, ಮಣಾಲ್ ಹೆಬ್ಬಾಳ್ಕರ್, ಯಲ್ಲಪ್ಪ ಕಲಕಾಂಬ್ಕರ, ಮಾರುತಿ ಪಾಟೀಲ, ಮಹಾದೇವ ಕಂಗ್ರಾಳಕರ, ಪರಶುರಾಮ ತೋರೆ, ನಿರ್ಮಲಾ ಕಲಕಾಂಬ್ಕರ್, ರಾಜಶ್ರೀ ಕೆ, ಸರಿತಾ ತುಪ್ಪಟ, ವೈಷ್ಣವಿ ಖಟಾವಕರ, ಪಿಡಿಒ ವೀಣಾ ಹಲವಾಯಿ, ವರ್ಷಾ ಸಂಗನಕರ ಇತರರಿದ್ದರು.

ಸುಳಗಾ ಗ್ರಾಮದಲ್ಲಿ ರೈತ ಸಮುದಾಯ ಭವನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net