ಗಣಪತಿ ಪೆಂಡಾಲಿನಲ್ಲಿ ಧಾರ್ಮಿಕ ಕಾರ್ಯಕ್ರಮ

ಫೋಟೋ ಶೀರ್ಷಿಕೆ 05 ಸಿಆರ್_ಪಿ-2ಎ
ಚನ್ನರಾಯಪಟ್ಟಣದ ಗಣಪತಿ ಪೆಂಡಾಲಿನಲ್ಲಿ ಭಾನುವಾರದಂದು ನಡೆದ ಹೋಮದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ, ಪತ್ನಿ ಕುಸುಮಾ, ಪುತ್ರಿ ನಕ್ಷತ್ರಾ ಭಾಗವಹಿಸಿದ್ದರು.
Published on

ಚನ್ನರಾಯಪಟ್ಟಣ: ಪಟ್ಟಣದ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿ ವಿಸರ್ಜನಾ ಮಹೋತ್ಸವ ಅಂಗವಾಗಿ ಭಾನುವಾರ ಧಾರ್ಮಿಕ ಕಾರ್ಯಕ್ರಮ ನಡೆಯಿತು.

ಲೋಕ ಕಲ್ಯಾಣಾರ್ಥವಾಗಿ ನಡೆಸಿದ ಹೋಮದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ, ಪತ್ನಿ ಕುಸುಮಾ ಬಾಲಕೃಷ್ಣ ಭಾಗವಹಿಸಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ನಂತರ ಮಹಾಮಂಗಳಾರತಿ ನಡೆಯಿತು. ವೇದಬ್ರಹ್ಮ ಬಾಲಕೃಷ್ಣ ಭಟ್ ಅವರ ತಂಡದಿಂದ ಹೋಮ ನಡೆಯಿತು.

ಮಹಾಮಂಗಳಾರತಿ ಸ್ವೀಕರಿಸಿ ಮಾತನಾಡಿದ ಶಾಸಕ ಸಿ.ಎನ್.ಬಾಲಕೃಷ್ಣ, ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ ದಿನದಿಂದ ವಿಸರ್ಜನಾ ದಿನದವರೆಗೂ ನಿತ್ಯ ಅನ್ನ ಸಂತರ್ಪಣೆ ನಡೆಸಲಾಗುತ್ತಿದೆ. ಇದರೊಂದಿಗೆ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲರೂ ಸೌಹಾರ್ಧಯುತವಾಗಿ ಗಣೇಶ ಹಬ್ಬ ಆಚರಣೆ ಮಾಡಿಕೊಂಡು ಬರುವುದು ನಮ್ಮೂರಿನ ಹೆಗ್ಗಳಿಕೆ ಎಂದರು.

ಗಣಪತಿ ಸೇವಾ ಸಮಿತಿಯ ಪೆಂಡಾಲಿಗೆ ಈಗಾಗಲೇ ವಿವಿಧ ಮೂಲಗಳಿಂದ ಅನುದಾನ ನೀಡಲಾಗಿದೆ. ಇನ್ನಷ್ಟು ಅಭಿವೃದ್ಧಿಗೆ 10 ಲಕ್ಷ ರೂ.ಗಳಿಗೆ ಬೇಡಿಕೆ ಸಲ್ಲಿಸಿದ್ದು, ಮುಂದಿನ ಮಾರ್ಚ್‌ನೊಳಗೆ ಪುರಸಭೆಯಿಂದ 12 ಲಕ್ಷ ರೂ. ಅನುದಾನ ಒದಗಿಸುವ ನಿಟ್ಟಿನಲ್ಲಿ ಅನುಕೂಲ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಸೇವಾ ಸಮಿತಿ ಅಧ್ಯಕ್ಷ ಸಿ.ಎನ್.ಅಶೋಕ್, ಪದಾಧಿಕಾರಿಗಳಾದ ಸತ್ಯನಾರಾಯಣ, ಸಿ.ಕೆ.ಕೃಷ್ಣ, ಸಿ.ಎನ್.ವೆಂಕಟೇಶ್, ಮಹಾದೇವ್, ಕಸಾಪ ತಾಲೂಕು ಅಧ್ಯಕ್ಷ ಎಚ್.ಎನ್.ಲೋಕೇಶ್, ಕೆಂಪೇಗೌಡ ವೇದಿಕೆ ಅಧ್ಯಕ್ಷ ಆನಂದ್ ಕಾಳೇನಹಳ್ಳಿ, ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ಜಯಪಾಲ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net