ಮಾರಿಗುಡಿ ದೇವಳದಲ್ಲಿ ಚಪ್ಪರ ಮುಹೂರ್ತ

chappara
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಜರುಗಲಿರುವ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ನೆರವೇರಿಸಲಾಯಿತು.
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಜರುಗಲಿರುವ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸೋಮವಾರ ಚಪ್ಪರ ಮುಹೂರ್ತ ನೆರವೇರಿತು.

ಕೆ.ಪಿ.ಕುಮಾರಗುರು ತಂತ್ರಿ ನೇತೃತ್ವದಲ್ಲಿ, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ ಉಪಸ್ಥಿತಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಗೌರವಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಲಾಲಾಜಿ ಆರ್.ಮೆಂಡನ್, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ.ರಘುಪತಿ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ಕೆ.ರವಿಕಿರಣ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಮನೋಹರ ಎಸ್.ಶೆಟ್ಟಿ, ಮಾಧವ ಆರ್.ಪಾಲನ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾಪು ದಿವಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿ, ಭಗವಾನ್ ದಾಸ್ ಶೆಟ್ಟಿಗಾರ್, ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಕೋಶಾಧಿಕಾರಿ ಕೆ.ವಿಶ್ವನಾಥ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ, ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ್, ಕಾಪು ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿಕ್ರಂ ಕಾಪು, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು, ವಿವಿಧ ಸಮಿತಿ ಪದಾಧಿಕಾರಿಗಳು, ಗ್ರಾಮ ಸೀಮೆ ಭಕ್ತರು ಪಾಲ್ಗೊಂಡಿದ್ದರು.

ದೇಗುಲದಲ್ಲಿ ಫೆ.4ರಂದು ನವದುರ್ಗಾ ಲೇಖನ ಯಜ್ಞ ಸಮರ್ಪಣಾ ಪೂರ್ವಕವಾಗಿ ನವಚಂಡಿಯಾಗ, 9ರಂದು ಸ್ವರ್ಣ ಗದ್ದುಗೆ, ರಜತ ರಥ ಪುರಪ್ರವೇಶ ನಡೆಯಲಿದೆ. 22, 23ರಂದು ಬೃಹತ್ ಹೊರೆಕಾಣಿಕೆ ಸಮರ್ಪಣೆ, 25ರಿಂದ ಮಾರ್ಚ್ 5ರವರೆಗೆ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ. ಕೆ.ವಾಸುದೇವ ಶೆಟ್ಟಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net