ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

New Project (26)
Published on

ಉಪ್ಪಿನಂಗಡಿ: ಇಲ್ಲಿನ ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.18ರಿಂದ ಡಿ.23ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ದೇವಾಲಯದಲ್ಲಿ ನ.26ರಂದು ಚಪ್ಪರ ಮುಹೂರ್ತ ನೆರವೇರಿಸಲಾಯಿತು.

ದೇವಾಲಯದ ಪ್ರಧಾನ ಅರ್ಚಕ ಕೇಶವರಾಜ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಜಗದೀಶ ರಾವ್ ಮಣಿಕ್ಕಳ, ದೇವಾಲಯದ ಆಡಳಿತ ಸಮಿತಿಯ ಅಧ್ಯಕ್ಷ ನಡುಸಾರು ಉದಯಶಂಕರ ಭಟ್ಟ, ಉಪಾಧ್ಯಕ್ಷ ಸುರೇಶ್ ಅತ್ರೆಮಜಲು, ಕಾರ್ಯದರ್ಶಿ ಕೇಶವ ಗೌಡ ರಂಗಾಜೆ, ಕೋಶಾಧಿಕಾರಿ ರಾಮಚಂದ್ರ ಮಣಿಯಾಣಿ ನೆಡ್ಚಿಲು, ಸದಸ್ಯರಾದ ಶಾಂಭವಿ ರೈ ಪುಳಿತ್ತಡಿ, ಹರೀಶ್ವರ ಮೊಗ್ರಾಲ್, ಶಂಕರನಾರಾಯಣ ಭಟ್ ಬೊಳ್ಳಾವು, ಸದಾನಂದ ಶೆಟ್ಟಿ ಕಿಂಡೋವು, ಜತ್ತಪ್ಪ ನಾಯ್ಕ ಬೊಳ್ಳಾವು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಜಯಗೋವಿಂದ ಶರ್ಮಾ ಪದಾಳ, ಜತೆ ಕಾರ್ಯದರ್ಶಿ ಸುರೇಶ್ ಗೌಂಡತ್ತಿಗೆ, ವಿವಿಧ ಸಮಿತಿಗಳ ಗಿರೀಶ್ ಆರ್ತಿಲ, ಸುನೀಲ್ ಕುಮಾರ್ ದಡ್ಡು, ವಸಂತ ನಾಯ್ಕ ಬೊಳ್ಳಾವು, ಧರ್ನಪ್ಪ ನಾಯ್ಕ ಬೊಳ್ಳಾವು, ಪ್ರಶಾಂತ್ ಪೆರಿಯಡ್ಕ, ಕಂಗ್ವೆ ವಿಶ್ವನಾಥ ಶೆಟ್ಟಿ, ವಸಂತ ಕುಕ್ಕುಜೆ, ವೀರಪ್ಪ ಗೌಡ ಪುಳಿತ್ತಡಿ, ರಾಧಾಕೃಷ್ಣ ಭಟ್ ಬೊಳ್ಳಾವು, ಮಹಾಲಿಂಗೇಶ್ವರ ಭಟ್ ಮಧುವನ, ರಘು ಪೂಜಾರಿ, ಜಯಂತ ಪೊರೋಳಿ, ರಾಮಚಂದ್ರ ಭಟ್ ಕಲ್ಲಾಜೆ, ವೆಂಕಟ್ರಮಣ ಭಟ್ ಮುಂಚಿಕ್ಕಾನ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net