ಚಾರ ಮೇಲ್ಬೇಟ್ಟು ಗರಡಿ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

hbr
Published on

ಹೆಬ್ರಿ: ಚಾರ ಮೇಲ್ಬೇಟ್ಟು ಶ್ರೀ ಬ್ರಹ್ಮಬೈದರ್ಕಳ ಮತ್ತು ಶಿವರಾಯ ಗರಡಿ ಬ್ರಹ್ಮಕಲಶೋತ್ಸವ ವಿಧಿವಿಧಾನಗಳಿಗೆ ಬುಧವಾರ ಮುಂಜಾನೆ ಚಾರ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮತ್ತು ಕೆರೆಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಜ್ಯೋತಿಯನ್ನು ಏಕಕಾಲದಲ್ಲಿ ಸಕಲ ಬಿರುದಾವಳಿಯೊಂದಿಗೆ ತಂದು ಗರಡಿಯಲ್ಲಿ ಜ್ಯೋತಿ ಬೆಳಗಿಸಿ ಚಾಲನೆ ನೀಡಲಾಯಿತು.

ಬಳಿಕ ಗಣಪತಿ ಹೋಮ, ಉಗ್ರಾಣ ಮುಹೂರ್ತ, ಪ್ರಕಾರಬಲಿ, ಪುಣ್ಯಾಹವಾಚನ, ಪಂಚಗವ್ಯ, ವಾಸ್ತುಪೂಜೆ, ಬಿಂಬಾಧಿವಾಸ, ಸಪ್ತಶುದ್ಧಿ ರಾಕ್ಷೋಘ್ನಹೋಮ, ದೇವತಾ ಪ್ರಾರ್ಥನೆ, ಸೇವೆಯಲ್ಲಿ ತೊಡಗಿಕೊಂಡವರಿಗೆ ಗೌರವ ಸಮರ್ಪಣೆ ನಡೆಯಿತು. ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಗೌರವಾಧ್ಯಕ್ಷ ಬಿ.ಹರ್ಷ ಶೆಟ್ಟಿ ಹುತ್ತುರ್ಕೆ, ಆನುವಂಶಿಕ ಆಡಳಿತ ಮೊಕ್ತೇಸರ ಸುರೇಶ ಹೆಗ್ಡೆ ತಾರಾಳಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಸಿ.ಎಂ.ಪ್ರಸನ್ನ ಕುಮಾರ್ ಶೆಟ್ಟಿ, ಆರ್ಥಿಕ ಸಮಿತಿ ಅಧ್ಯಕ್ಷ ವಾದಿರಾಜ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಮಿಥುನ್ ಶೆಟ್ಟಿ ಚಾರ, ಪುರೋಹಿತ್ ಸುಬ್ರಹ್ಮಣ್ಯ ಹೇರಳೆ, ಗರಡಿ ಪೂಜಾರಿ ವರ್ಗದವರಾದ ಲಕ್ಷ್ಮಣ ಪೂಜಾರಿ, ಸುಧಾಕರ ಪೂಜಾರಿ, ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ, ಆನುವಂಶಿಕ 9 ಮನೆಯವರು, ವಾರ್ಡ್ ಸಮಿತಿ ಮುಖ್ಯಸ್ಥರು, ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net