ಶಾಸಕರಿಂದ ಶಿಷ್ಟಾಚಾರ ಉಲ್ಲಂಘನೆ ಆರೋಪ, ಬಿಜೆಪಿ ಮುಖಂಡರಿಂದ ಶಾಸಕರ ವಿರುದ್ಧ ಆಕ್ರೋಶ

22dbp2(New Photo)
Published on

ದೊಡ್ಡಬಳ್ಳಾಪುರ: ಇತ್ತೀಚೆಗೆ ನಗರಸಭಾ ವ್ಯಾಪ್ತಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಚಾಲನೆ ನೀಡುವ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ನಗರಸಭೆ ಆವರಣದಲ್ಲಿ ಏಕಕಾಲದಲ್ಲಿ ಪ್ರತಿಭಟನೆ ನಡೆಸಿದರು.

ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ನಗರಸಭೆ ಆವರಣದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಶಾಸಕ ಟಿ.ವೆಂಕಟರಮಣಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ವ್ಯಾಪ್ತಿಯಲ್ಲಿನ ವಿವಿಧ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸದ ವಿಷಯ. ಆದರೆ ಕಾಮಗಾರಿಗಳ ಉದ್ಘಾಟನೆಗೆ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸದೆ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ. ಸರ್ಕಾರದ ಅನುದಾನವನ್ನು ಶಾಸಕರ ಅನುದಾನವೆಂದು ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಶಂಕುಸ್ಥಾಪನೆ ನಡೆದಿರುವುದು ಖಂಡನೀಯ ಎಂದು ಬಿಜೆಪಿ ನಗರಾಧ್ಯಕ್ಷ ಶಿವಶಂಕರ್ ತಿಳಿಸಿದರು.

ಮತ್ತೊಂದೆಡೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು, ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗುತ್ತಾ ಅಭಿವೃದ್ಧಿಯನ್ನು ಸಹಿಸಲಾರದೆ ಬಿಜೆಪಿ ಮುಖಂಡರು ಈ ರೀತಿಯ ಅನಗತ್ಯ ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದ ಅಭಿವೃದ್ಧಿಗೆ ಅಡಚಣೆ ಉಂಟು ಮಾಡುತ್ತಿರುವುದು ಸರಿಯಲ್ಲ. ನಗರದ ಅಭಿವೃದ್ಧಿ ಕಾರ್ಯಗಳಲ್ಲಿ ಬಿಜೆಪಿಯ ಕೆಲ ಮುಖಂಡರು ಕಾಮಗಾರಿಗಳನ್ನು ನಿಲ್ಲಿಸಿರುವುದು ಎಂದು ಆರೋಪಿಸಿದರು.

ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಪಾಲಿಸುವುದು ಅಧಿಕಾರಿಗಳ ಕೆಲಸವೇ ಹೊರತು ನನ್ನದಲ್ಲ, ಕರೊನಾ ಕಾರಣ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನ ಸೇರುವಂತಿಲ್ಲ ಎಂಬ ನಿಯಮವಿದೆ. ಆದಾಗ್ಯೂ ಮುಂದಿನ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಮ್ಮ ತಾಲೂಕಿಗೆ ಸಮ್ಮಿಶ್ರ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನವನ್ನು ಸ್ಥಳೀಯ ಮುಖಂಡರು ತಡೆಹಿಡಿದಿದ್ದಾರೆ. ಟಿ.ವೆಂಕಟರಮಣಯ್ಯ, ಶಾಸಕ 15ನೇ ಹಣಕಾಸು ಯೋಜನೆಯಡಿ ಸರ್ಕಾರ ಸ್ಥಳೀಯ ಆಡಳಿತಗಳಿಗೆ ಹಣ ಬಿಡುಗಡೆ ಮಾಡಿದೆ. ಇಲ್ಲಿನ ಶಾಸಕರು ನಗರಸಭೆ ಚುನಾವಣಾ ದೃಷ್ಟಿಯಿಂದ ತನ್ನ ಸ್ವಂತ ಹಣವೆಂಬಂತೆ ಪ್ರಚಾರ ಮಾಡುತ್ತಿರುವುದು ಖಂಡನೀಯ. ಶಿಷ್ಟಾಚಾರ ಪಾಲನೆ ಮಾಡುವುದು ಜನಪ್ರತಿನಿಧಿಗಳ ಕರ್ತವ್ಯ. ದಿಬ್ಬೂರು ಜಯಣ್ಣ ಅಧ್ಯಕ್ಷ ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net