ಸಮಾಜ ಅಭಿವೃದ್ಧಿಗೆ ಶ್ರಮಿಸಿದ ವಚನ ಚಳವಳಿ

19 nmt
Published on

ನ್ಯಾಮತಿ: ಬಸವಣ್ಣನವರ ನೇತೃತ್ವದಲ್ಲಿ ವಚನ ಚಳವಳಿಯು ಕೇವಲ ವ್ಯಕ್ತಿಯ ಶ್ರೇಯೋಭಿವೃದ್ಧಿಗೆ ಶ್ರಮಿಸದೆ, ಸಮಾಜದ ಅಭಿವೃದ್ಧಿಗೆ ಶ್ರಮಿಸಿದೆ ಎಂದು ಹೊನ್ನಾಳಿ ಎಸ್​ಎಂಎಸ್​ಎಫ್​ಜೆಸಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಕೆ.ನಾಗೇಶಪ್ಪ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಸೋಮವಾರ ಹೊನ್ನಾಳಿ ತಾಲೂಕು ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ಮಹಿಳಾ ವೇದಿಕೆ ವತಿಯಿಂದ ವಚನಗಳಲ್ಲಿ ಸಾಮಾಜಿಕ ಪ್ರಜ್ಞೆ ವಿಷಯ ಕುರಿತು ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸದಲ್ಲಿ ಮಾತನಾಡಿದರು.

ಸಾಮಾಜಿಕ, ರಾಜಕೀಯ, ಧಾರ್ವಿುಕ ಹಾಗೂ ಸಾಂಸ್ಕೃತಿಕವಾಗಿ ಅನೇಕ ಬದಲಾವಣೆ ಹೊಂದಿದ ಕಾಲಘಟ್ಟದಲ್ಲಿ ಶೋಷಣೆ ಅನುಭವಿಸಿದ್ದ ಪ್ರತಿ ವ್ಯಕ್ತಿಯನ್ನು ಮೇಲು- ಕೀಳು ಎನ್ನದೆ ಸರ್ವರ ಏಳ್ಗೆಗೆ ಶರಣರು ಶ್ರಮಿಸಿದ್ದಾರೆ ಎಂದರು.

ವಚನಗಳಲ್ಲಿ ಅಡಗಿರುವ ಸಾಮಾಜಿಕ ಮೌಲ್ಯಗಳನ್ನು ಇಂದಿನ ವಿದ್ಯಾರ್ಥಿಗಳು ಓದುವ ಮೂಲಕ ಅದರಲ್ಲಿನ ತಿರುಳನ್ನು ಅರಿತು ಕೊಳ್ಳಬೇಕು ಎಂದು ಹೊನ್ನಾಳಿ ತಾಲೂಕು ಶರಣ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ಡಾ.ಎಂ.ಆರ್. ಲೋಕೇಶ್ ಹೇಳಿದರು.

ಅಧ್ಯಕ್ಷತೆಯನ್ನು ಪ್ರಾಚಾರ್ಯು ಡಾ.ಟಿ.ಸಿ. ಭಾರತಿ ವಹಿಸಿದ್ದರು. ಹೊನ್ನಾಳಿ ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಶಾರದಾ ಕಣಗೊಟಗಿ, ಸಹಾಯಕ ಪ್ರಾಧ್ಯಾಪಕ ಜಿ.ಪಿ. ರಾಘವೇಂದ್ರ, ಡಾ.ಟಿ.ಆರ್. ಕುಬೇರಪ್ಪ, ಎಂ.ಎಸ್. ಗಿರೀಶ್, ಕಾರ್ಯಕಾರಿ ಸಮಿತಿ ಸದಸ್ಯರು, ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ಮಹಿಳಾ ವೇದಿಕೆ ಸದಸ್ಯರು ಮತ್ತು ಸರ್ಕಾರಿ ಪ್ರಥಮ ದರ್ಜೆ ಆಡಳಿತಾತ್ಮಕ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net