ದತ್ತಿ ಉಪನ್ಯಾಸ ಕಾರ್ಯಕ್ರಮ 9ರಂದು

Debat
Published on

ನರಗುಂದ: ಪಟ್ಟಣದ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಜಿಲ್ಲಾ ಹಾಗೂ ತಾಲೂಕು ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ, ಬಸವ ಕೇಂದ್ರ, ಶ್ರೀಮುರುಘ ರಾಜೇಂದ್ರ ಫ್ರೀ ಬೋರ್ಡಿಂಗ್ ಟ್ರಸ್ಟ್ ಆಶ್ರಯದಲ್ಲಿ ಸೆ. 9ರಂದು ಸಂಜೆ 7 ಗಂಟೆಗೆ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಚನ್ನಬಸಪ್ಪ ಕಂಠಿ ಗೌರವ ಉಪಸ್ಥಿತರಿರುವರು. ಜಿಲ್ಲಾ ಕದಳಿ ಮಹಿಳಾ ವೇದಿಕೆ ಸಲಹೆಗಾರ್ತಿ ಸುಕನ್ಯಾ ಸಾಲಿ ಅಧ್ಯಕ್ಷತೆ ವಹಿಸುವರು. 12ನೇ ಶತಮಾನದ ಶಿವಶರಣೆಯರು ಎಂಬ ವಿಷಯದ ಕುರಿತು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ಪಾಟೀಲ ಉಪನ್ಯಾಸ ನೀಡುವರು. ಜಿಲ್ಲಾ ಬರಹಗಾರರ ಬಳಗದ ಅಧ್ಯಕ್ಷೆ ಕಲಾಶ್ರೀ ಹಾದಿಮನಿ, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಡಾ. ಮೋಹನ ಕಲಹಾಳ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net