ಭಕ್ತರ ಸಹಕಾರದಿಂದ ಚಾತುರ್ಮಾಸ ಯಶಸ್ವಿ

samarpane
samarpane
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ ಪ್ರತಿಯೊಬ್ಬರೂ ಸ್ವಯಂಸೇವಕರಾಗಿ ಸಮರ್ಪಣಾಭಾವದಿಂದ ಸೇವೆ ಮಾಡಿದ್ದರಿಂದ ಈ ಬಾರಿಯ ಚಾತುರ್ಮಾಸ್ಯ ಅತ್ಯಂತ ಯಶಸ್ವಿಯಾಗಿದೆ. ಡಿಸೆಂಬರ್ ವೇಳೆ ಮಠದಲ್ಲಿ ಸಾಮೂಹಿಕ ಶನಿಪೂಜೆ ಜರುಗಲಿದೆ ಎಂದು ಕಟಪಾಡಿ ಪಡುಕುತ್ಯಾರು ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಶ್ರೀ ಸರಸ್ವತಿ ಪೀಠಾಧೀಶ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು. ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಶ್ರೀ ಸರಸ್ವತಿ ಪೀಠದಲ್ಲಿ ಭಾನುವಾರ ಜರುಗಿದ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ವಡೆರಹೋಬಳಿ ಅವರು ಚಾತುರ್ಮಾಸಕ್ಕೆ ಸಹಕರಿಸಿದವರಿಗೆ ಅಭಿನಂದಿಸಿದ್ದು, ಶ್ರೀಗಳ 50ನೇ ಜನ್ಮವರ್ಧಂತಿ ಕಾರ್ಯಕ್ರಮಕ್ಕೆ ಭಕ್ತರ ಸಹಕಾರ ಯಾಚಿಸಿದರು. ಸಮಿತಿ ಗೌರವಾಧ್ಯಕ್ಷ ಪಿ.ವಿ.ಗಂಗಾಧರ್ ಆಚಾರ್ಯ, ಆನೆಗುಂದಿ ಮಹಾಸಂಸ್ಥಾನ ಪಂಚಸಿಂಹಾಸನ ವಿಕಾಸ ಸಮಿತಿ ಆನೆಗುಂದಿ ಅಧ್ಯಕ್ಷ ದಿನೇಶ್ ಆಚಾರ್ಯ, ಶ್ರೀ ಸರಸ್ವತಿ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷ ಬಿ.ಸೂರ್ಯಕುಮಾರ್ ಆಚಾರ್ಯ ಹಳೆಯಂಗಡಿ, ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ಶ್ರೀ ಸರಸ್ವತಿ ಗೋವು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಸುಂದರ ಆಚಾರ್ಯ ಮಂಗಳೂರು, ಶ್ರೀ ಸರಸ್ವತಿ ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಆಚಾರ್ಯ, ಶ್ರೀ ಸರಸ್ವತಿ ಪೂರ್ವಛಾತ್ರ ಸಂಘ ಅಧ್ಯಕ್ಷ ಕೇಶವ ಶರ್ಮಾ, ತ್ರಾಸಿ ಸುಧಾಕರ ಆಚಾರ್ಯ, ಕಾಡಬೆಟ್ಟು ನಾಗರಾಜ ಆಚಾರ್ಯ, ಕಳಿ ಚಂದ್ರಯ್ಯ ಆಚಾರ್ಯ, ಜನಾರ್ದನ ಆಚಾರ್ಯ, ಸುರೇಶ್ ಆಚಾರ್ಯ ನಿಟ್ಟೆ, ಪ್ರಶಾಂತ್ ಆಚಾರ್ಯ ಕಟಪಾಡಿ, ಲೋಕೇಶ್ ಆಚಾರ್ಯ ಮಂಚಕಲ್, ಗುರುರಾಜ್ ಆಚಾರ್ಯ ಮಂಗಳೂರು, ಲತಾ ಆಚಾರ್ಯ, ಮೋಹನ್ ಕುಮಾರ್ ಬೊಳ್ಳೂರು ಉಪಸ್ಥಿತರಿದ್ದರು. ಲೋಕೇಶ್ ಎಂ ಬಿ ಆಚಾರ್ ಕಂಬಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅರವಿಂದ ವೈ.ಆಚಾರ್ಯ ಬೆಳುವಾಯಿ ವಂದಿಸಿದರು.

ಮಠ, ಮಂದಿರ, ದೇವಸ್ಥಾನಗಳಲ್ಲಿ ಜರುಗುವ ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಚಟುವಟಿಕೆಗಳು ಒಂದಿಲ್ಲೊಂದು ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ಪೂರಕವಾಗಿರುತ್ತದೆ. ನಾವು ದುಡಿಯುವ ಹಣ ಸತ್ಕಾರ್ಯಕ್ಕೆ ಸದ್ವಿನಿಯೋಗಿಸಿದಲ್ಲಿ ಹಣ ಹಾಗೂ ಕಾರ್ಯದ ಮೌಲ್ಯ ಹೆಚ್ಚುತ್ತದೆ. ಕಾಳಹಸ್ತೇಂದ್ರ ಸರಸ್ವತಿ ಶ್ರೀ, ಆನೆಗುಂದಿ ಶ್ರೀ ಸರಸ್ವತಿ ಪೀಠಾಧೀಶ https://www.vijayavani.net/g-bro-ermals-team-won-first-place-in-the-tiger-costume-competition https://www.vijayavani.net/kamalashile-sharanavaratri-festival-is-a-grand-success

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net