ಚೌಟಿಮಾರಿಯಮ್ಮ ವಾರ್ಷಿಕೋತ್ಸವ ಸಂಪನ್ನ

chowty mariyamma
Published on

ಮಡಿಕೇರಿ: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ ೨೧ನೇ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಗುರುವಾರ ಸಂಪನ್ನಗೊಂಡಿತು.


ಸೆ.೨೪ರ ಸಂಜೆಯಿಂದ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು. ಸೆ.೨೫ ರಂದು ಮುಂಜಾನೆಯಿಂದ ಚಂಡಿಕಾ ಹೋಮ, ಮಧ್ಯಾಹ್ನ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನೆರವೇರಿತು. ಸಂಜೆ ವಾರ್ಷಿಕೋತ್ಸವ ಪ್ರಯುಕ್ತ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ಹಾಗೂ ತೀರ್ಥಪ್ರಸಾದ ವಿತರಿಸಲಾಯಿತು.


ನಂತರ ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ನಡೆಯಿತು. ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು. ನಗರದ ವಿವಿಧ ಬಡಾವಣೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯವನ್ನು ಹೂಗಳಿಂದ ಅಲಂಕರಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net